ಬೆಂಗಳೂರು:ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್​ ಪೊಲೀಸ್​ ಠಾಣೆ ಸಿಬ್ಬಂದಿ ಸಂತ್ರಸ್ತನನ್ನು ವಶಕ್ಕೆ ಪಡೆದಿದ್ದಾರೆ.
ನಗರ್ತಪೇಟೆಯಲ್ಲಿರುವ ಮೊಬೈಲ್​ ಅಂಗಡಿ ಮಾಲೀಕ ಮುಖೇಶ್​ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿರುವುದನ್ನು ಖಂಡಿಸಿ ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಹಾಗೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಸಂಜೆ ತಮ್ಮ ಅಂಗಡಿಯಲ್ಲಿ ಹನುಮಾನ್​ ಚಾಲೀಸಾ ಹಾಕಿದ್ದಕ್ಕೆ ಐದರಿಂದ ಆರು ಮಂದಿ ಯುವಕರು ಮಾಲೀಕ ಮುಖೇಶ್​ ಮೇಲೆ ಹಲ್ಲೆ ನಡೆಸಿದ್ದರು. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು. ಘಟನೆ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದವರನ್ನು ರಕ್ಷಿಸಲು ಬೇರೆ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ:ಐಪಿಎಲ್​ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಮತ್ತೊಂದು ಆಘಾತ; ಸ್ಟಾರ್​ ವೇಗಿ ಅಲಭ್ಯ
ಇದಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಂತ್ರಸ್ತ ಮುಖೇಶ್​ ಪ್ರತಿಭಟನಾ ರ‍್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಬಿಜೆಪಿ ಶಾಸಕ ಸುರೇಶ್​ ಕುಮಾರ್​ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರು ಅವರನ್ನು ಎಳೆದಾಡಿರುವ ಘಟನೆ ನಡೆದಿದೆ.
ಈ ಕುರಿತು ಮಾತನಾಡಿದ ಶಾಸಕ ಸುರೇಶ್​ ಕುಮಾರ್​, ನಾವು ಬೆಂಗಳೂರಿನಲ್ಲಿ ಇಲ್ಲ. ಹಿಂದೆ ಕಾಶ್ಮೀರದಲ್ಲಿ ಆದಂತೆ ಇಲ್ಲಿ ಆಗುತ್ತಿದೆ. ನಮ್ಮ ಮೇಲೆ ಇಲ್ಲಿ ದೌರ್ಜನ್ಯ ನಡೆಯುತ್ತಿದೆ. ಕೂಡಲೇ ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ಸುರೇಶ್​ ಕುಮಾರ್​ ಆಗ್ರಹಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − 6 =
Remember me
