ಚಾಮರಾಜನಗರ:ಹನೂರು ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್​ ಮತ್ತು ಬಿಜೆಪಿ ಮೈತ್ರಿ ಆಗಿದೆ. ಆಯಾ ಸಮಯ- ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತವೆ. ಇದನ್ನು ದೊಡ್ಡ ವಿಷಯವಾಗಿ ಬಿಂಬಿಸುವುದು ಬೇಡ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ.
ಹನೂರು ಪಟ್ಟಣ ಪಂಚಾಯಿತಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿವೆ. 13 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ ಚಂದ್ರಮ್ಮ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್​ನ ಹರೀಶ್​ ಕುಮಾರ್​ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸ್ಥಳೀಯ ಶಾಸಕ ಕಾಂಗ್ರೆಸ್​ನ ನರೇಂದ್ರ ಅವರು ಬಿಜೆಪಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಬೆಂಬಲಿಸಿದರೆ, ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್​ ಅವರು ಕಾಂಗ್ರೆಸ್​ನ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಬೆಂಬಲಿಸಿದರು.
ಹನೂರು ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಂಸದ ಶ್ರೀನಿವಾಸ ಪ್ರಸಾದ್​, ಈ ಮೈತ್ರಿ ಅನಿವಾರ್ಯವಾಗಿತ್ತು. ಹಿಂದೆ ಕೇಂದ್ರದಲ್ಲಿ ಎನ್​ಡಿಎ ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ ಅವರಂತಹವರೇ ಬೆಂಬಲ ನೀಡಿದ್ದರು. ಕರುಣಾನಿಧಿ, ಮಮತಾ ಬ್ಯಾನರ್ಜಿ, ಜಾರ್ಜ್ ಫರ್ನಾಂಡೀಸ್ ಕೈ ಜೋಡಿಸಿದ್ದರು. ಆಯಾ ಸಮಯ, ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತವೆ. ಸ್ಥಳೀಯವಾಗಿ ಮೈತ್ರಿ ಅನುವಾರ್ಯವಾಗಿತ್ತು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದಿದ್ದಾರೆ. ಎಲ್ಲರೂ ಸೇರಿಕೊಂಡು ಪಟ್ಟಣದ ಅಭಿವೃದ್ಧಿಗೆ ಸಹಕರಿಸೋಣ ಎಂದು ಇದೇ ವೇಳೆ ಕೋರಿದ್ದಾರೆ.
ಭಿಕ್ಷುಕನಾಗಿ ಚಿಂದಿ ಆಯುತ್ತಿದ್ದ ನಿವೃತ್ತ ಪೊಲೀಸಪ್ಪನಿಗೆ ಹೊಸ ಜೀವನ!

ವಿನಯ್​ ಕುಲಕರ್ಣಿ ಪರ ಸುರ್ಜೇವಾಲ ಬ್ಯಾಟಿಂಗ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
