ಬೆಂಗಳೂರು: ನಿತ್ಯ 12,500 ಕ್ಯೂಸೆಕ್ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ತಿರಸ್ಕಾರ ಮಾಡಿದ್ದು ಸಂತಸ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಿತ್ಯ 3000 ಕ್ಯೂಸೆಕ್ ನೀರು ಬಿಡುಗಡೆಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸ್ಸು ಬಳಿಕ ಸಂಜೆ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
12,500 ಕ್ಯೂಸೆಕ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಶಿಫಾರಸು ಮಾಡಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮಿತಿಗೆ ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ. ರಾಜ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡ ಸಮಿತಿಗೆ ಧನ್ಯವಾದ ಎಂದರು.ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ 66 ಟಿಎಂಸಿ ನೀರು ಅವರಿಗೆ ಸೇರುತ್ತದೆ. ಕೆಆರ್‌ಎಸ್, ಕಬಿನಿ, ಹೇಮಾವತಿ ಆಣೆಕಟ್ಟೆಗಳ ಮೇಲಿನ ಒತ್ತಡ ತಗ್ಗುತ್ತದೆ. ಬೆಂಗಳೂರಿನ ಕುಡಿಯುವ ನೀರಿಗೂ ಸಾಕಷ್ಟು ಅನುಕೂಲ ಆಗುತ್ತದೆ. ಕಳೆದ ವಾರ ಸುಪ್ರೀಂಕೋರ್ಟ್ ತೀರ್ಪು ನೀಡುವ ಹೊತ್ತಿನಲ್ಲಿ ಕರ್ನಾಟಕದವರು ಎಷ್ಟು ಬೇಕಾದರೂ ಅಣೆಕಟ್ಟು ಕಟ್ಟಿಕೊಳ್ಳಲಿ, ನಿಮಗೆ ತೊಂದರೆ ಏನು? ನಿಮ್ಮ ಪಾಲಿನ ನೀರು 177 ಟಿಎಂಸಿ ನಿಮಗೆ ಸಿಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದರು.
ಮೇಕೆದಾಟು ಅಣೆಕಟ್ಟು ನೀರನ್ನು ಕನಕಪುರದವರು ಬಳಸಿಕೊಳ್ಳುತ್ತಾರೆ ಎಂದು ಯಾರೋ ಹೇಳುತ್ತಿದ್ದರು. ಅಣೆಕಟ್ಟು ಇರುವುದೇ ತಮಿಳುನಾಡು ಗಡಿಯಲ್ಲಿ ಎಂದು ಛೇಡಿಸಿದರು. ಕಾವೇರಿ ನೀರಿನ ಎರಡೂ ಸಮಿತಿಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಸುಪ್ರೀಂಕೋರ್ಟಿನ ತೀರ್ಪಿನಿಂದ ಮತ್ತೊಮ್ಮೆ ಭರವಸೆ ಮೂಡಿದೆ, ಆದ ಕಾರಣ ನಮ್ಮ ಸಂಸದರು, ಕೇಂದ್ರ ಸಚಿವರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಎಂದು ಮನವಿ ಮಾಡುತ್ತೇನೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − sixteen =
Remember me
