ಬೆಂಗಳೂರು:ಮಾಜಿ ಪ್ರಧಾನಿ ದೇವೆಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಕುಟುಂಬವೇ ಬಿಜೆಪಿ ಸೇರುತ್ತಿದೆ. ಹೀಗಾದರೆ ನಮ್ಮ ಗತಿ ಏನು ಎಂದು ದಳದ ಕಾರ್ಯಕರ್ತರು ಕಾಂಗ್ರೆಸ್​ ಪಕ್ಷದ ನಾಯಕರ ಸಂಪರ್ಕ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಯಡಿಯೂರಪ್ಪ ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ ಎಂದ ಪ್ರಹ್ಲಾದ ಜೋಶಿ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 5- 6 ಕ್ಷೇತ್ರಗಳಲ್ಲಿ ನಮಗೂ ಮತ್ತು ದಳಕ್ಕೂ ನೇರಾ- ನೇರ ಸ್ಪರ್ಧೆ ಇತ್ತು. ಆದರೆ ಈಗ ದಳ ಎಲ್ಲಿದೆ? ಎರಡೂ ಪಕ್ಷಗಳ ನಾಯಕರುಗಳು ನಮ್ಮ ವಿರುದ್ಧ ಹೋರಾಟ ಮಾಡಿದವರು. ಅವರೂ ಸಹ ಮುಂದಿನ ರಾಜಕೀಯ ಭವಿಷ್ಯವನ್ನು ನೋಡುತ್ತಾರಲ್ಲವೇ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ ಎಂದರು. ನಾನು ಸಹ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನಾಯಕ. ನಮ್ಮ ಚುನಾವಣಾ ಅಭ್ಯರ್ಥಿಯ ಘೋಷಣೆಯೂ ಆಗಿದೆ. ನಾವು ಸಹ ತಯಾರಿ ಮಾಡಿಕೊಳ್ಳಬೇಕಲ್ಲವೇ? ಮುಂದೇನು ಮಾಡುವುದು ನಾವು ಸಹ ಚರ್ಚೆ ಮಾಡುತ್ತಿದ್ದೇವೆ ಎಂದು ವ್ಯಂಗ್ಯವಾಡಿದರು.
ಸಂಸದ ಡಿ.ಕೆ.ಸುರೇಶ್ ಅವರಿಗೆ ನಾವು ತಕ್ಕಪಾಠ ಕಲಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಮೊದಲು ಅವರ ಪಕ್ಷದ ಪರಿಸ್ಥಿತಿ ಬಗ್ಗೆ ಮಾತನಾಡಲಿ. ದಳ ಇದೆಯೋ? ಇಲ್ಲವೋ? ಎಂಬುದರ ಬಗ್ಗೆ ಮೊದಲು ಹೇಳಲಿ. ಆನಂತರ ಪ್ರಬಲ ಅಭ್ಯರ್ಥಿ ಬಗ್ಗೆ ಮಾತನಾಡಲಿ ಎಂದರು.
ಸುಪ್ರೀಂ ಕೋರ್ಟಿನಲ್ಲಿತ್ತು:ಬೆಂಗಳೂರು ಅರಮನೆ ಜಾಗದ ವಿವಾದದ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿತ್ತು. ಇತ್ತೀಚಿನ ಬೆಳವಣಿಗೆಯ ಬಗ್ಗೆ ನನಗೂ ಹೆಚ್ಚಿನ ಮಾಹಿತಿ ಇಲ್ಲ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ತೀರ್ಮಾನವಾಗಿದ್ದ ವಿಚಾರವಿದು. ನ್ಯಾಯಲಯದ ಆದೇಶದಂತೆ ನಾವು ನಡೆದುಕೊಳ್ಳಬೇಕು. ಅಧಿಕಾರಿಗಳು ಖುದ್ದಾಗಿ ನ್ಯಾಯಲಯಕ್ಕೆ ಹಾಜರಾಗಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ನಿಮಗೆ ಉತ್ತರಿಸುತ್ತೇನೆ ಎಂದು ತಿಳಿಸಿದರು.
ಸಿಎಎಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುತ್ತೀರಾ ಎಂದು ಕೇಳಿದಾಗ ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಿಎಂ ಮತ್ತು ಇತರೇ ನಾಯಕರ ಬಳಿ ಚರ್ಚೆ ಮಾಡಿದ ನಂತರ ಮಾತನಾಡುತ್ತೇನೆ ಎಂದರು. ‘ಇಂಡಿಯಾ’ ಒಕ್ಕೂಟ ಜನರನ್ನು ಲೂಟಿ ಮಾಡುತ್ತದೆ ಎಂದು ತಮಿಳುನಾಡಿನಲ್ಲಿ ಮೋದಿ ಪ್ರಧಾನಿ ಹೇಳಿಕೆ ಬಗ್ಗೆ ಕೇಳಿದಾಗ ಚುನಾಚಣಾ ಫಲಿತಾಂಶ ಇದಕ್ಕೆಲ್ಲಾ ಉತ್ತರ ನೀಡುತ್ತದೆ ಎಂದು ತಿರುಗೇಟು ನೀಡಿದರು.
ಒಮ್ಮತದಿಂದ ಅಭ್ಯರ್ಥಿ ಪಟ್ಟಿ ನಿರ್ಧಾರ:ಲೋಕಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಲ್ಲಾ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಚುನಾವಣೆ ಸಮಿತಿ (ಸಿಇಸಿ) ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿರುವ ಬಗ್ಗೆ ಕೇಳಿದಾಗ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿದ್ದಾರೆ. ಅವರು ವೈದ್ಯರಿಂದ ಸಮಯ ಪಡೆದಿದ್ದ ಕಾರಣ ಇಲ್ಲಿಗೆ ಆಗಮಿಸಿದ್ದಾರೆ ಎಂದರು.
ನನಗೆ ಹೆಚ್ಚಿನ ಮಾಹಿತಿ ಇಲ್ಲ:ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಬಗ್ಗೆ ಕೇಳಿದಾಗ ತಡವಾಗಿ ಸುದ್ದಿ ತಿಳಿಯಿತು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ನಾನು ಪ್ರತ್ರಿಕ್ರಿಯೆ ನೀಡುವುದಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ಗೃಹಮಂತ್ರಿಯಾಗಿ ಪರಮೇಶ್ವರ್ ಅವರು ಇದ್ದಾರೆ. ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಈ ವಿಚಾರವಾಗಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಈ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉತ್ತರಿಸಿದರು.
ಐಪಿಎಲ್ ಆರಂಭಕ್ಕೂ ಮುನ್ನ ದೆಹಲಿ ಕ್ಯಾಪಿಟಲ್ಸ್​ಗೆ ಅಘಾತ: ಲುಂಗಿ ಎನ್‌ಗಿಡಿ ಔಟ್, ಬದಲಿಗೆ ಅಸೀಸ್​ ಆಟಗಾರ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
