ಕುಂದಾಪುರ:ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ವಿರುದ್ದ ಪ್ರಕರಣ ದಾಖಲಾಗಿದೆ. ಸೆ. 26ರಂದು ವಿದ್ಯಾರ್ಥಿನಿ ಶಾಲೆಗೆ ಹೋಗಿ ಮನೆಗೆ ಬಂದವಳು ಇನ್ನು ಶಾಲೆಗೆ ಹೋಗುವುದಿಲ್ಲ ಎಂದಿದ್ದಾಳೆ. ಮನೆಯವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ಕೊಠಡಿಗೆ ಕರೆಸಿಕೊಂಡು ಟ್ಯೂಷನ್‌ಗೆ ಯಾಕೆ ಹೋಗುತ್ತೀಯಾ? ನಾನು ಹೇಳಿ ಕೊಟ್ಟಷ್ಟು ಹೇಳಿ ಕೊಡ್ತಾರಾ? ಅವರ ಮನೆಯ ಪಾತ್ರೆ ತೊಳೆಯಲಿಕ್ಕೆ ಹೋಗುವುದಾ ಎಂದು ಕೇಳಿದ್ದಲ್ಲದೇ ಅವಾಚ್ಯ ಪದ ಬಳಸಿ ಅವಮಾನಿಸಿದ್ದಾರೆ ಎಂದಿದ್ದಾಳೆ.
ಇದನ್ನೂ ಓದಿ:‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಿ: ರಾಜ್ಯದ ಜನರಲ್ಲಿ ಕಾಂಗ್ರೆಸ್ ಮನವಿ
ರಾತ್ರಿ ಮತ್ತೆ ವಿಚಾರಿಸಿದಾಗ, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ತನ್ನ ಮೈಕೈ ಗಲ್ಲ ಮುಟ್ಟಿ ಯಾರಿಗೂ ಹೇಳಬೇಡ. ನಿನಗೆ ನಾನು ಬೇಕಾ? ನಿನ್ನ ತಂದೆ ತಾಯಿ ಬೇಕಾ? ಎಂದು ಲೈಂಗಿಕ ಕಿರುಕುಳ ನೀಡಿರುವುದಾಗಿ ಮನೆಯವರಲ್ಲಿ ತಿಳಿಸಿದ್ದಾಳೆ. ಬಳಿಕ ಊರವರು ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದು, ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಹಿಂದೆ ಏನೇನಿದೆ ಲೆಕ್ಕಾಚಾರ?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಅವರ ಮುಂದಿರುವ ಸವಾಲುಗಳು ಯಾವುವು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
