ಶಿವಮೊಗ್ಗ:ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ 10 ಜನ ಆರೋಪಿಗಳನ್ನು 11 ದಿನ ಪೊಲೀಸರ ಕಸ್ಟಡಿಗೆ ನೀಡಿ ಶಿವಮೊಗ್ಗದ ಎರಡನೇ ಜೆಎಂಎಫ್​ಸಿ ನ್ಯಾಯಾಲಯವು ಆದೇಶಿಸಿದೆ. ಫೆಬ್ರವರಿ 20ರ ರಾತ್ರಿ ನಡೆದ ಹರ್ಷ ಕೊಲೆ ಪ್ರಕರಣದಲ್ಲಿ ಇದುವರೆಗೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಎರಡನೇ ಜೆಎಂಎಫ್​ಸಿ ನ್ಯಾಯಾಧೀಶರಾದ ಶ್ರೀಮತಿ ಸಮ್ಮತಿರವರು, ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಇಂದು ಸಿಇಎನ್ ಠಾಣೆ ಪೊಲೀಸ್​ ಇನ್ಸ್​ಪೆಕ್ಟರ್​ ಗುರುರಾಜ್, ಬಂಧಿತ ಎಲ್ಲ 10 ಜನ ಆರೋಪಿಗಳನ್ನು ಶಿವಮೊಗ್ಗದ ಎರಡನೇ ಜೆಎಂಎಫ್​ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರ ಮುಂದೆ ಪೊಲೀಸರು, ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು.
ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ನ್ಯಾಯಾಧೀಶರು ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಎಲ್ಲ 10 ಮಂದಿ ಬಂಧಿತರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ, ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರೀತಿಯ​ ಪುತಿನ್​ ನಾನು ನಿನ್ನ ತಾಯಿಯಾಗಿದ್ದರೆ… ವೈರಲ್​ ಆಯ್ತು ಅಮೆರಿಕ ನಟಿಯ ವಿಡಿಯೋ ಸಂದೇಶ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
