ಶಿವಮೊಗ್ಗ:ಸುಮಾರು ಒಂದು ತಿಂಗಳ ಹಿಂದೆ ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಕೈಗೊಂಡಿದ್ದು, ಎಫ್​ಐಆರ್ ಕೂಡ ದಾಖಲಿಸಿದೆ.
24 ವರ್ಷದ ಹರ್ಷನನ್ನು ಫೆ. 21ರ ರಾತ್ರಿ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಕೊಲೆ ಮಾಡಲಾಗಿತ್ತು. ಅಂದು ಹರ್ಷನನ್ನು ಅಟ್ಟಾಡಿಸಿಕೊಂಡು ಹೋದ ದುಷ್ಕರ್ಮಿಗಳು ಭರ್ಜಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಹರ್ಷನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಬದುಕುಳಿಯಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ದಿನೇದಿನೆ ನಡೆಸಿದ ಪತ್ತೆ ಕಾರ್ಯಾಚರಣೆಯಲ್ಲಿ ಹತ್ತು ಆರೋಪಿಗಳನ್ನು ಬಂಧಿಸಿ, ಕೇಸು ದಾಖಲಿಸಿಕೊಂಡಿದ್ದರು.
ಬಳಿಕ ಈ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಸಿದ ರಾಷ್ಟ್ರೀಯ ತನಿಖಾ ದಳ ಎಫ್​ಐಆರ್​ ದಾಖಲಿಸಿಕೊಂಡಿದೆ. ಎಫ್​ಐಆರ್ ವರದಿಯಲ್ಲಿ ಕೊಲೆ ಹಿಂದಿನ ಉದ್ದೇಶವನ್ನು ಉಲ್ಲೇಖಿಸಲಾಗಿದೆ. ವೈಯಕ್ತಿಕ ದ್ವೇಷದಿಂದ ಹರ್ಷನನ್ನು ಕೊಲೆ ಮಾಡಲಾಗಿತ್ತು ಎಂದು ಹೇಳಲಾಗಿದ್ದರೂ, ಇದೀಗ ಮತ್ತೊಂದು ವಿಷಯ ಬಹಿರಂಗಗೊಂಡಿದೆ. ಆರೋಪಿಗಳು ಕೋಮುಗಲಭೆ ಸೃಷ್ಟಿಸಿ, ಕಾನೂನು ಸುವ್ಯವಸ್ಥೆಗೆ ಭಂಗ ತಂದು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ಉದ್ದೇಶದಿಂದಲೇ ಈ ಕೊಲೆಯನ್ನು ನಡೆಸಿದ್ದರು ಎಂಬುದು ಎನ್​ಐಎ ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಬಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ; ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
