ಹಾಸನ:ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ನಿನ್ನೆಯಷ್ಟೇ ದೆಹಲಿಯಲ್ಲಿ ಬಿಜೆಪಿಯನ್ನು ಅಧಿಕೃತವಾಗಿ ಸೇರಿದ್ದರು. ಇದೀಗ ಇನ್ನೊಬ್ಬ ಶಾಸಕ ಕೂಡ ಜೆಡಿಎಸ್​ಗೆ ವಿದಾಯ ಹೇಳಿದ್ದು, ದಳಪತಿಗಳಿಗೆ ಮತ್ತೊಂದು ಹಿನ್ನಡೆ ಎಂಬಂತಾಗಿದೆ.
ಹಾಸನ-ಅರಸೀಕೆರೆ ಶಾಸಕ ಶಿವಲಿಂಗೇಗೌಡ ಇಂದು ಜೆಡಿಎಸ್​ಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಶಿವಲಿಂಗೇಗೌಡ ಇಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಶಾಸಕ ಸ್ಥಾನಕ್ಕೂ ರಾಜೀನಾಮೆ ‌ಸಲ್ಲಿಸಿದ್ದಾರೆ.
ಇದನ್ನೂ ಓದಿ:ಅರಕಲಗೂಡಿನ ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್​ ತೊರೆದು ಬಿಜೆಪಿಗೆ ಸೇರ್ಪಡೆ; ದೆಹಲಿಯಲ್ಲಿ ಪಕ್ಷಕ್ಕೆ ಸ್ವಾಗತಿಸಿದ ನಡ್ಡಾ
ಶಿವಲಿಂಗೇಗೌಡ ಮುಂದೆ ಕಾಂಗ್ರೆಸ್ ಸೇರ್ಪಡೆ ಆಗುವುದು ಖಚಿತ ಹಾಗೂ ಇದೇ ಚುನಾವಣೆಯಲ್ಲೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುಳಿವನ್ನು ಅರಸೀಕೆರೆಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದರು. ಮತ್ತೊಂದೆಡೆ ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಕೆಲವು ಮೂಲ ಕಾಂಗ್ರೆಸ್ ನಾಯಕರ ಆಕ್ಷೇಪವಿದೆ ಎಂದೂ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಈ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಕಾವೇರಿದಂತಾಗಿದೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಭೀಕರ ಅಪಘಾತ: ಮಹಿಳೆಯ ತಲೆ ನಜ್ಜುಗುಜ್ಜು, ಇನ್ನೊಬ್ಬಾಕೆಯ ಎರಡೂ ಕಾಲು ಕಟ್; ಬದುಕುಳಿದ ಮಗು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
