ಹಾಸನ:ಹಾಸನಾಂಬ ದೇವಿಯ ದರ್ಶನೋತ್ಸವ ಇಂದು ಗುರುವಾರ ವಿಧ್ಯುಕ್ತವಾಗಿ ಆರಂಭವಾಗಿದೆ. ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ಬಾಗಿಲು ತೆರೆಯಲಾಯಿತು. ನಾಳೆ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಅವಕಾಶವಿದೆ.
ಅರ್ಚಕರು ಪೂಜೆ ಸಲ್ಲಿಸಿದ ಬಳಿಕ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಕೆ.ಎನ್‌. ರಾಜಣ್ಣ, ಶಾಸಕ ಸ್ವರೂಪ್ ಪ್ರಕಾಶ್‌, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಹಾಸನಾಂಬ ದೇವಸ್ಥಾನ ಆಡಳಿತಾಧಿಕಾರಿ ಮಾರುತಿ, ಎಸ್ಪಿ ಸುಜೀತಾ, ಎಎಸ್ಪಿ ತಮ್ಮಯ್ಯ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ವಾರ್ತಾಧಿಕಾರಿ ಮೀನಾಕ್ಷಮ್ಮ ಸೇರಿದಂತೆ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲ ಬೀಗ ಮುದ್ರೆ ತೆರೆಯಲಾಯಿತು.
ಇದನ್ನೂ ಓದಿ:ಹಾಸನಾಂಬೆ ಬಾಗಿಲು ತೆರೆಯಲು ಕ್ಷಣ ಗಣನೆ; ಹೂವಿನಿಂದ ಅಲಂಕೃತಗೊಂಡ ದೇವಸ್ಥಾನದ ಆವರಣ
ವಿವಿಧ ಪುಷ್ಪಗಳಿಂದ ದೇವಾಲಯದ ಅಲಂಕಾರಬೆಳಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಪ್ರದಾಯದಂತೆ ತಳವಾರ ವಂಶದ ನರಸಿಂಹರಾಜ್ ಅರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅವಕಾಶ ಮಾಡಿಕೊಟ್ಟರು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದೆ. ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಉಳಿದ ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಲಕ್ಷಾಂತರ ಭಕ್ತರ ಆಗಮನನಾಳೆಯಿಂದ 12 ದಿನ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇಂದು ಹಾಸನಾಂಬೆಯ ಗರ್ಭಗುಡಿ ಸ್ವಚ್ಛತೆ, ಪೂಜೆ, ನೈವೇದ್ಯ ಪ್ರಕ್ರಿಯೆಗಳಷ್ಟೇ ನಡೆಯಲಿದೆ. ಇದೇ ಮೊದಲ ಬಾರಿಗೆ ದೇವಿಯ ದರ್ಶನದ ಜೊತೆ ಜೊತೆಯಲ್ಲೇ ಹಲವು ರೀತಿಯ ಹೊಸ ಪ್ರಯೋಗ ಅಳವಡಿಸಲಾಗುತ್ತಿದೆ.
ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟ ದೀಪ ವರ್ಷ ಪೂರ್ತಿ ಬೆಳಗುತ್ತದೆ. ಮುಂದಿನ ವರ್ಷ ಬಾಗಿಲು ತೆರೆದಾಗ ದೀಪ ಬೆಳಗುತ್ತಲೇ ಇರುತ್ತದೆ. ಒಂದು ವರ್ಷದ ನಂತರವೂ ದೇವರಿಗೆ ಇಟ್ಟ ನೈವೇದ್ಯ ಸಹ ಚೆನ್ನಾಗಿರುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇವಿಯ ಪವಾಡ ನೋಡಲು ಪ್ರತಿವರ್ಷ ಲಕ್ಷಾಂತರ ಭಕ್ತರು ಬರುತ್ತಾರೆ. ಜಿಲ್ಲಾಡಳಿತ ಭಕ್ತರಿಗೆ ಎಲ್ಲ ರೀತಿಯ ಮೂಲ ಸೌಕರ್ಯದ ಸೂಕ್ತ ವ್ಯವಸ್ಥೆ ಕಲ್ಪಿಸಿದೆ.
ವೈಮಾನಿಕ ವೀಕ್ಷಣೆಈ ವರ್ಷದ ವಿಶೇಷತೆ ಎಂದರೆ ಆಗಸದಿಂದ ಹಾಸನ ಎಂಬ ವಿನೂತನ ವೈಮಾನಿಕ ವೀಕ್ಷಣೆ ಮಾಡಿರುವುದು. ನ.3 ರಿಂದ 6 ರವರೆಗೆ 4,300 ರೂ. ಪಾವತಿಸಿದರೆ 6-7 ನಿಮಿಷ ಆಗಸದಲ್ಲಿ ಹಾರಾಡಿ ಹಾಸನ ನಗರ, ಸೀಗೆಗುಡ್ಡ, ಮಳೆ ಮಲ್ಲೇಶ್ವರ ದೇವಾಲಯ, ಗೆಂಡೆಕಟ್ಟೆ ವನ್ಯಧಾಮವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ದಿಲ್ಲಿ ಸಚಿವ ರಾಜ್ ಕುಮಾರ್ ಆನಂದ್ ಹಿನ್ನೆಲೆ ಏನು? ಎಲ್ಲೆಲ್ಲಿ ಇಡಿ ದಾಳಿ ನಡೆಸಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + five =
Remember me
