ಹಾಸನ:ವರ್ಷಾಂತ್ಯದಲ್ಲಿ ರಾಜ್ಯದ ಸಿಎಂ ಬದಲಾಗುವುದು ಖಚಿತ, ಜತೆಗೆ ಕರ್ನಾಟಕ ಎರಡು ಭಾಗವಾಗಿ ಹಂಚಿ ಹೋಗುತ್ತದೆ ಎಂದು ಬ್ರಹ್ಮಾಂಡ ಗುರೂಜಿ ಶ್ರೀ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದರು.
ಗುರುವಾರ ಹಾಸನಾಂಬ ದೇವಿ ದರ್ಶನ ಪಡೆದ ಅವರು ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.ಮೂರು ಮುಖ್ಯಮಂತ್ರಿಗಳ ಆಡಳಿತಾವಧಿ ನಂತರ ಕರ್ನಾಟಕವೂ ಆಂಧ್ರ-ತೆಲಂಗಾಣದಂತೆ ಒಡೆದು ಹೋಳಾಗುತ್ತದೆ. ಬೆಳಗಾವಿ ಉತ್ತರ ಕರ್ನಾಟಕದ ಕೇಂದ್ರ ಬಿಂದುವಾದರೆ ಬೆಂಗಳೂರು ದಕ್ಷಿಣದ ರಾಜಧಾನಿಯಾಗಿರುತ್ತದೆ. ವರ್ಷಾಂತ್ಯದಲ್ಲಿ ರಾಜ್ಯದ ಸಿಎಂ ಕೂಡ ಬದಲಾಗುತ್ತಾರೆ. ನಾನು ಹೇಳುವ ಭವಿಷ್ಯ ಸುಳ್ಳಾಗುವುದಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದರೂ ಬಿಜೆಪಿಯವರೇ ಅವರನ್ನು ಆ ಸ್ಥಾನದಲ್ಲಿ ಕೂರಲು ಬಿಡುವುದಿಲ್ಲ. ಅದಕ್ಕಾಗಿ ಒಂದು ತಂಡ ಪಕ್ಷದಲ್ಲಿ ಕೆಲಸ ಮಾಡುತ್ತಿದೆ. ಆದ್ದರಿಂದಲೇ ಅವರು ವೈರಾಗ್ಯದ ಕಡೆಗೆ ಆಸಕ್ತಿ ತೋರುತ್ತಿದ್ದಾರೆ. ಗಡ್ಡ ತೆಗೆಯಲು ಅವರ ಬಳಿ ದುಡ್ಡಿಲ್ಲವೇ ? ಏಕೆ ಅವರು ಸರ್ವ ತ್ಯಾಗಿಯಂತೆ ಗೋಚರಿಸುತ್ತಿದ್ದಾರೆಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen + fifteen =
Remember me
