ಹಾಸನ:ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ಗುರುವಾರ ತಡ ರಾತ್ರಿಯಲ್ಲಿ ನಡೆದಿದೆ.
ಪುನೀತ್ (28) ಕೊಲೆಯಾದ ಯುವಕ. ಬೇಡಿಗನಹಳ್ಳಿ ಕೆರೆಯ ಏರಿ ಮೇಲೆ ಶೂಟೌಟ್ ಮಾಡಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪುನೀತ್​ ಸ್ವಗ್ರಾಮ ಹೊಸೂರಿನಿಂದ ಬೇಡಿಗನಹಳ್ಳಿಯ ಅಜ್ಜಿಯ ಮನೆಗೆ ಹಬ್ಬಕ್ಕೆಂದು ಹೋಗಿದ್ದ. ಹಬ್ಬ ಮುಗಿಸಿಕೊಂಡು ವಾಪಸ್ ಬರುವಾಗ ಕೆರೆಯ ಏರಿ ಮೇಲೆ ಕೊಲೆ ಮಾಡಲಾಗಿದೆ.
ಇದನ್ನೂ ಓದಿ:ಚಂದನವನಕ್ಕೆ ನಶೆ ನಂಟು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.(ದಿಗ್ವಿಜಯ ನ್ಯೂಸ್​)
ಪ್ರತಿ ವರ್ಷ ತಪ್ಪದೇ ನಟ ವಿಷ್ಣುವರ್ಧನ್​ ಬರ್ತಡೇ ಆಚರಿಸುತ್ತಿದ್ದ ಅಭಿಮಾನಿ ನೇಣಿಗೆ ಶರಣು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 5 =
Remember me
