ಹಾಸನ:ಹಸಿರು ವಲಯದಲ್ಲಿದ್ದ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಅಧಿಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದವರ ಪ್ರವೇಶ ತಡೆಯಬೇಕು ಎಂದು ಶಾಸಕ ಶಿವಲಿಂಗೇಗೌಡ ಆಗ್ರಹಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರು ಆತಂಕ ಹೊರ ಹಾಕಿದ್ದಾರೆ.ಪ್ರಧಾನಿ ಮೋದಿ ಅವರು ಏನೇ ನಿರ್ಧಾರ ತೆಗೆದುಕೊಂಡರೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಡಬೇಕು. ಇನ್ನು ಸ್ವಲ್ಪ ದಿನ ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಯಾರು ಬರದಂತೆ ತಡೆಹಿಡಿಯಬೇಕು ಎಂದರು.
ಇದನ್ನೂ ಓದಿಮನೆಮನೆಗೆ ತೆರಳಿ ಕರೊನಾ ವೈರಸ್​ ಪರೀಕ್ಷೆ ಆರಂಭ
ಮನೆಯೊಳಗೆ ಕರೊನಾ ಮಾರಿಯನ್ನು ಕೂಡಿಕೊಳ್ಳಲು ಆಗುತ್ತಾ. ಯಾರು ಎಲ್ಲಿ ಬದುಕಿತ್ತಿದ್ದಾರೆಯೊ ಅಲ್ಲೇ ಬದುಕಲಿ. ಸತ್ತರೆ ಅಲ್ಲೇ ಸಾಯಲಿ. 25 ವರ್ಷದಿಂದ ಅನ್ಯ ರಾಜ್ಯಗಳಲ್ಲಿ ಬದಕಿ ಈಗ ಕರ್ನಾಟಕ ಸುರಕ್ಷಿತ ತಾಣ ಅಂತ ಬರುತ್ತಿದ್ದಾರೆ. ಹೀಗಾಗಿ ಯಾರು ಬರುವುದು ಬೇಡ. ಅಲ್ಲೇ ಇರಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈಗಲೂ ಹಾಸನ ಜಿಲ್ಲೆ ಸುರಕ್ಷಿತವಾಗಿದೆ. ಬಾಂಬೆ ಸೇರಿದಂತೆ ಹೊರ ರಾಜ್ಯಗಳ ಸಹವಾಸವೇ ನಮಗೆ ಬೇಡ.  ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಮನವಿ ಮಾಡಿದರು.
ರೈತರಿಗೆ 5, ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ನೆರವು ಘೋಷಿಸಿದ ಸಿಎಂ ಬಿಎಸ್​ವೈ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × three =
Remember me
