ಹಾಸನ:ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ವೋಟು ಹಾಕಿ ಪತ್ನಿ ಗೆಲ್ಲಿಸಿದ ತಪ್ಪಿಗೆ ಭಯಪಡುತ್ತಿರುವ ಜನ: ಬಟ್ಟೆ ಬಿಚ್ಚಿಕೊಂಡು ಬೀದಿಯಲ್ಲಿ ರಂಪಾಟ
ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ, ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪೊಲೀಸ್ ಅಧಿಕಾರಿಯ ಸೂಸೈಡ್​ನಿಂದ ಪೊಲೀಸ್ ಇಲಾಖೆ ಇದೀಗ ಆತಂಕಕ್ಕೀಡಾಗಿದೆ. ಆತ್ಮಹತ್ಯೆ ಸಂಬಂಧ ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ಮಕ್ಕಳ ಮುಂದೆ ಬೆತ್ತಲಾದ ರೆಹಾನಾಳನ್ನು ಬಿಡದ ಸಂಕಷ್ಟ: ಸುಪ್ರೀಂನಲ್ಲೂ ಶಾಕ್​ ಆಗುವ ಸಾಧ್ಯತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
