ಹಾಸನ:ಐದು ದಿನಗಳ ಹಿಂದೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಚಿಕಿತ್ಸೆ ಫಲಕಾರಿಯಾಗದೇ ಇಂದು (ಬುಧವಾರ) ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಸಮುದಾಯ ಭವನದ ಕೀ ಕೇಳಿದ್ದೇ ತಪ್ಪಾ? ಪೊಲೀಸ್​ ಎಂದು ನೋಡದೆ ಶಿಕ್ಷಕ ಹೀಗೆ ಮಾಡ್ಬೋದಾ?
ಮೋಹನ್ ಕುಮಾರ್(32) ಮೃತ ದುರ್ದೈವಿ. ಐದು ದಿನದ ಹಿಂದೆ ಬೈಕ್​ನಲ್ಲಿ ಪೊಲೀಸ್​ ಠಾಣೆಗೆ ಹೋಗುವಾಗ ಹಾಸನದ ಕಂದಲಿ ಬಳಿ ಅಪಘಾತವಾಗಿತ್ತು. ತಕ್ಷಣ ಚಿಕಿತ್ಸೆಗಾಗಿ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಮೋಹನ್​ ಕುಮಾರ್​ ಅವರಿಗೆ ಕೇವಲ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಕರೊನಾ ಲಾಕ್‌ಡೌನ್ ಆದಾಗಿನಿಂದ ಮೋಹನ್​ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅವರ ಅಕಾಲಿಕ ಮರಣದಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಸಿಆರ್​ಪಿಎಫ್​ ಯೋಧನ ಕುಟುಂಬದ ಮೇಲೆ ರಮೇಶ್​ ಜಾರಕಿಹೊಳಿ ಬೆಂಬಲಿಗರಿಂದ ಹಲ್ಲೆ ಆರೋಪ
ಇಪಿಎಫ್​ ಬಗ್ಗೆ ಚಿಂತೆ ಬೇಡ, ಇನ್ನೂ 3ತಿಂಗಳು ಕೇಂದ್ರವೇ ಪಾವತಿಸುತ್ತದೆ: ನಿರ್ಮಲಾ ಸೀತಾರಾಮನ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 2 =
Remember me
