ಹಾಸನ:ತೆಂಗಿನಕಾಯಿಯ ಗೊನೆ ಬಿದ್ದು ಬಾಲಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ (16) ಮೃತ ಬಾಲಕ. ಶ್ರವಣಬೆಳಗೊಳ ಹೊರವಲಯದ ಉತ್ತೇನಹಳ್ಳಿ ಗ್ರಾಮದ ರವಿ ಮತ್ತು ಅನಸೂಯ ದಂಪತಿ ಬಿ.ಚೋಳೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರಜ್ವಲ್ ಪ್ರತಿನಿತ್ಯ ತೋಟದ ಕೆಲಸ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದ.
ಇದನ್ನೂ ಓದಿ:ಜಲಾಂತರ್ಗಾಮಿ ನೌಕೆಯಲ್ಲಿದ್ದ ಐವರು ದುರಂತ ಅಂತ್ಯ: ಸಾವಿಗೆ ಆಮ್ಲಜನಕ ಕೊರತೆ ಕಾರಣವಲ್ಲ, ಇಲ್ಲಿದೆ ಪೂರ್ಣ ಮಾಹಿತಿ…
ಭಾರೀ ಮಳೆ, ಗಾಳಿಯಿಂದ ಮರದಿಂದ ತೆಂಗಿನಕಾಯಿಗಳು ಬಿದ್ದಿದ್ದವು. ಬಿದ್ದಿದ್ದ ತೆಂಗಿನಕಾಯಿಗಳನ್ನು ಒಂದೆಡೆ ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ತೆಂಗಿನಮರದಿಂದ ಬಾಲಕನ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಇದರ ಪರಿಣಾಮ ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಮೃತ ಪ್ರಜ್ವಲ್​, ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಇದೀಗ ಮಗನನ್ನು ಕಳೆದುಕೊಂಡ ಪಾಲಕರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಮಯ ನ್ಯೂಸ್​)
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ: 1100 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ, 11 ಮಂದಿ ವಿರುದ್ಧ ಆರೋಪ

ಭಾರತ ಬೆಳೆದಾಗ ವಿಶ್ವವೇ ಬೆಳೆಯುತ್ತದೆ: ಪ್ರಧಾನಿ ಮೋದಿ ಯುಎಸ್​ ಕಾಂಗ್ರೆಸ್​ ಭಾಷಣದ ಹೈಲೈಟ್ಸ್​ ಇಲ್ಲಿದೆ…

ಪ್ರಧಾನಿ ಮೋದಿ ಅಮೇರಿಕಾ ಪ್ರವಾಸ: ಅತಿಥಿಗಳ ಭೋಜನಕೂಟಕ್ಕೂ, ಗುಜರಾತ್​ಗೂ ಇದೆ ಈ ವಿಶೇಷ ವೈನ್​ ನಂಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 12 =
Remember me
