ಹಾಸನ:ಮಂಡ್ಯದ ಹಾಸ್ಟೆಲ್​ನಲ್ಲಿ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನಿಗೆ ಹುಡುಗಿಯರೆಲ್ಲ ಸೇರಿ ಥಳಿಸಿದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಅದೇ ರೀತಿಯ ಘಟನೆ ವರದಿಯಾಗಿದೆ.
ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವಸತಿ ಶಾಲೆಯಲ್ಲಿ 10ಕ್ಕೂ ಹೆಚ್ಚು‌ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಂಶುಪಾಲರ ನೀಚ ಕೃತ್ಯ ಬಯಲಾಗಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಾಂಶುಪಾಲ ಶಿವಕುಮಾರ್ ಎಂಬುವರನ್ನು ಬಂಧಿಸಲಾಗಿದೆ.
ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳಿಗೆ ಗುಡ್ ಟಚ್ ಬ್ಯಾಟ್ ಟಚ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು, ಮಕ್ಕಳ ಜೊತೆ ಸಮಾಲೋಚನೆ ನಡೆಸಿದಾಗ ಕೃತ್ಯ ಬಯಲಾಗಿದೆ.
51 ವರ್ಷದ ಪ್ರಾಂಶುಪಾಲರನ್ನು ನ್ಯಾಯಾಂಗ ಬಂಧನಕ್ಕೆ ಹಾಸನ ಪೊಲೀಸರು ಒಪ್ಪಿಸಿದ್ದಾರೆ. 30-35 ಮಕ್ಕಳಿರೋ ವಸತಿ ಶಾಲೆಯಲ್ಲಿ 15 ಮಕ್ಕಳಿಗೆ ಆರೋಪಿ ಪ್ರಾಂಶುಪಾಲ ಲೈಂಗಿಕ ಕಿರುಕುಳ ನಡೆದಿರುವುದು ಗಂಭೀರ ಸಂಗತಿ ಎಂದು ‌ಹಾಸನ ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ಬಗ್ಗೆ ಹಿಂದೆ ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಕರಣ ಮುಚ್ಚಿಹಾಕುವ ಯತ್ನ ನಡೆದ ಬಗ್ಗೆಯೂ ಆಪಾದನೆ ಕೇಳಿ ಬಂದಿದೆ. ಈ ಪ್ರಕರಣ ಮುಚ್ಚಿ ಹಾಕಲು ‌ಯಾರಾದರೂ ಒತ್ತು ನೀಡದ್ರೆ ಅವರ ಮೇಲೂ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ಪೊಲೀಸ್​ ವರಿಷ್ಠಾಧಿಕಾರಿ ನೀಡಿದ್ದಾರೆ.
ಸದ್ಯ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಅರಕಲಗೂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ಗೆ ಅತ್ಯಾಚಾರ, ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

ಗೂಗಲ್​ ಪೇನಲ್ಲಿ 2 ರೂ. ಪಾವತಿಸಿ 45 ಸಾವಿರ ಕಳ್ಕೊಂಡ ಉದ್ಯೋಗಿ! ಸೈಬರ್ ಕಳ್ಳರ ಹೊಸ ಟೆಕ್ನಿಕ್​ ಕಂಡು ಪೊಲೀಸರೇ ಶಾಕ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 9 =
Remember me
