ಬೆಂಗಳೂರು:ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ನ್ಯಾಯಾಲಯ ಅರೆಸ್ಟ್​ ವಾರೆಂಟ್​ ಜಾರಿ ಮಾಡಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ ಪ್ರಜ್ವಲ್ ವಿರುದ್ಧ ವಾರೆಂಟ್ ಹೊರಡಿಸಿದೆ.
ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್​ ಜಾರಿ ಮಾಡಿದರು ಪ್ರಜ್ವಲ್​ ಬಾರದೇ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಕಾರಣ ನ್ಯಾಯಾಲಯ ಅರೆಸ್ಟ್​ ವಾರೆಂಟ್​ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ. ಪ್ರೀತ್​ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಅರೆಸ್ಟ್​ ವಾರೆಂಟ್​ ಹೊರಡಿಸಿದ್ದಾರೆ.
ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೋಟಿಸ್ ಕೊಟ್ಟರೂ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿರಲಿಲ್ಲ. ಮೊದಲ ನೋಟಿಸ್‌ಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ 22 ದಿನಗಳಾದರೂ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ಸಾಗಿಲ್ಲ. ಇದೀಗ ಕೋರ್ಟ್ ವಾರೆಂಟ್ ಹೊರಡಿಸಿರೋದ್ರಿಂದ ಈ ಬಾರಿಯಾದ್ರೂ ಪ್ರಜ್ವಲ್ ವಿಚಾರಣೆಗೆ ಬರ್ತಾರಾ ಎಂಬ ಪ್ರಶ್ನೆ ಮೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + seven =
Remember me
