ಹಾಸನ: ತಾನು ಪ್ರೀತಿಸಿದ್ದ ಯುವತಿ ಪ್ರೀತಿಗೆ ನಿರಾಕರಿಸಿದಳೆಂಬ ಸಿಟ್ಟಿನಿಂದ ಪಾಗಲ್​ ಪ್ರೇಮಿ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:‘ಕಾಂಗ್ರೆಸ್​ಗೆ ಅಂಬೇಡ್ಕರ್​ ಶಾಪ ತಟ್ಟಿದೆ; ಕಂಬ ನಿಲ್ಲಿಸಿದರೂ ಗೆಲ್ಲುತ್ತಿದ್ದ ಪಕ್ಷಕ್ಕೆ ಕ್ಷೇತ್ರವೇ ಇಲ್ಲದಂತಾಗಿದೆ’
ಸುಷ್ಮಿತಾ (21) ಹತ್ಯೆಗೀಡಾದ ಯುವತಿ. ಈಕೆಯನ್ನು ಅದೇ ಗ್ರಾಮದ ಹೇಮಂತ್​ (25) ಹೆಸರಿನ ಯುವಕ ಪ್ರೀತಿಸುತ್ತಿದ್ದನಂತೆ. ಆದರೆ ಯುವತಿ ಪ್ರೀತಿಗೆ ಒಲ್ಲೆ ಎಂದಿದ್ದಾಳೆ. ಅದೇ ಸಿಟ್ಟಿನಿಂದ ಹೇಮಂತ್​ ಆಕೆಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ.
ಇದನ್ನೂ ಓದಿ:ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿ ವಿಡಿಯೋ ಮಾಡಿಕೊಂಡ! ಸೆಕ್ಸ್​ಗೆ ಒಪ್ಪದಿದ್ದರೆ ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಸಿದ
ಗುರುವಾರದಂದು ಯುವತಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದು ಬರುತ್ತಿರುವಾಗ ಏಕಾಏಕಿ ಆಕೆಯ ಮೇಲೆ ಹೇಮಂತ್​ ದಾಳಿ ನಡೆಸಿದ್ದಾನೆ. ಮಚ್ಚಿನಿಂದ ಆಕೆಯನ್ನು ಮನಬಂದಂತೆ ಕೊಚ್ಚಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)
ಮೆನೋಪಾಸ್‌ ನಂತರ ಪತ್ನಿಗೆ ಲೈಂಗಿಕಾಸಕ್ತಿಯೇ ಇಲ್ಲ- ನನಗೆ ದಿಕ್ಕೇ ತೋಚದಾಗಿದೆ; ಇದಕ್ಕೆ ಪರಿಹಾರವಿಲ್ಲವೆ?
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − two =
Remember me
