ಹಾಸನ:ವ್ಯವಹಾರದ ವಿಚಾರವಾಗಿ ಉಂಟಾದ ಮನಸ್ತಾಪದ ಹಿನ್ನೆಲೆ ಗಂಗಾಮಾತೆ ಮೇಲೆ ಆಣೆ ಪ್ರಮಾಣ ಮಾಡಲು ಹೋದ ಯುವಕರಿಬ್ಬರು ಕೆರೆಗೆ ಬಿದ್ದು ದುರಂತ ಅಂತ್ಯ ಕಂಡ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ಸಂಭವಿಸಿದೆ.
ಚಂದ್ರು(35) ಮತ್ತು ಆನಂದ್(30) ಮೃತರು. ಸಿಹಿ ತಿಂಡಿ ತಯಾರಿಸುವ ಕೆಲಸಕ್ಕೆ ಹಣ ಪಡೆದು ಕೆಲಸಕ್ಕೆ ಹೋಗದ ಕಾರಣ ಇಬ್ಬರನ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರವಾಗಿ ಗಂಗೆ(ನೀರು) ಮೇಲೆ ಆಣೆ ಮಾಡಲು ಗುರುವಾರ ರಾತ್ರಿ ಇವರಿಬ್ಬರೂ ತೇಜೂರು ಕೆರೆ ಬಳಿಗೆ ತೆರಳಿದ್ದರು.
ಈ ವೇಳೆ ಕಾಲುಜಾರಿ ಕೆರೆಗೆ ಬಿದ್ದ ಇಬ್ಬರೂ ನೀರಲ್ಲೇ ಮುಳುಗಿ ಮೃತಪಟ್ಟಿದ್ದಾರೆ. ಇಂದು(ಶುಕ್ರವಾರ) ಬೆಳಗ್ಗೆ ಮೃತದೇಹಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್)
ರೇಣುಕಾಚಾರ್ಯರ ತಮ್ಮನ ಪುತ್ರ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ… ಕಾರಿನ ಹಿಂಬದಿ ಸೀಟಿನ ರಹಸ್ಯ ಏನು?

ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + four =
Remember me
