ಹಾಸನ:2019ನೇ ಸಾಲಿನ ಯುಪಿಎಸ್​ಸಿ ಪರೀಕ್ಷಾ ಫಲಿತಾಂಶವಿಂದು ಪ್ರಕಟವಾಗಿದ್ದು, ಹಾಸನದ ಯುವಕ ಕನ್ನಡದಲ್ಲೇ ಪರೀಕ್ಷೆ ಬರೆದು 594 ರ್ಯಾಂಕ್ ಪಡೆದು ಯಶಸ್ಸು ಗಳಿಸಿದ್ದಾರೆ.
ಅರಸೀಕೆರೆ ತಾಲ್ಲೂಕಿನ ಹರಳಕಟ್ಟೆ ಗ್ರಾಮದ ಯುವಕ ದರ್ಶನ್​ ನಾಲ್ಕನೇ ಪ್ರಯತ್ನದಲ್ಲಿ ಸಫಲ ಕಂಡಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಮುಗಿಸಿದ ದರ್ಶನ್​, 5ನೇ ತರಗತಿಯಿಂದ 8ನೇ ತರಗತಿವರೆಗೆ ಬಳ್ಳಾರಿಯ ರಾಷ್ಟ್ರೋತ್ತಾನ ಶಾಲೆಯಲ್ಲಿ ಕಲಿತರು.
ಇದನ್ನೂ ಓದಿ:ಯುಪಿಎಸ್​ಸಿ ಪರೀಕ್ಷೆ-2019 ಫಲಿತಾಂಶ ಪ್ರಕಟ: ಪ್ರದೀಪ್​ ಸಿಂಗ್​ ಟಾಪರ್​
9 ರಿಂದ 10ನೇ ತರಗತಿ ತಿಪಟೂರಿನ ಎಸ್‌ವಿಪಿ ಶಾಲೆಯಲ್ಲಿ ಓದಿದ ಅವರು 2009ರಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿ, ಇನ್ಫೋಸಿಸ್​ನಲ್ಲಿ ಆರು ವರ್ಷ ಕೆಲಸ ಮಾಡಿ ಬಳಿಕ ಅಮೆರಿಕಕ್ಕೆ ತೆರಳಿದರು. ಅಲ್ಲಿಯೂ ಎರಡೂವರೆ ವರ್ಷ ಕೆಲಸ ಮಾಡಿ, ಕೆಲಸ ಬಿಟ್ಟು ಯುಪಿಎಸ್‌ಸಿ ತಯಾರಿ ನಡೆಸಲು ಆರಂಭಿಸಿದರು.
ಮೂರು ಪ್ರಯತ್ನದಲ್ಲಿ ವಿಫಲವಾಗಿದ್ದ ದರ್ಶನ್​, ನಾಲ್ಕನೇ ಪ್ರಯತ್ನದಲ್ಲಿ ಸಫಲತೆ ಕಂಡಿದ್ದಾರೆ. ವಿಶೇಷವೆಂದರೆ ಕನ್ನಡ ಮಾಧ್ಯಮದಲ್ಲೇ ಪರೀಕ್ಷೆ ಬರೆದು ಪಾಸ್ ಆಗಿದ್ದಾರೆ. ಇದೀಗ ದರ್ಶನ್​ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.
ಬಸವನಾಡಿನ ಯುವತಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಅಕ್ಕನ ಹಾದಿಯಲ್ಲೇ ತಂಗಿಯ ಪಯಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
