ಹಾಸನ:ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬೆನ್ನಲ್ಲೇ ಅವರ ತಂದೆ ಹಾಗೂ ಮಾಜಿ ಸಚಿವ ಎಚ್​.ಡಿ. ರೇವಣ್ಣ ವಿರುದ್ಧವೂ ಇದೇ ಆರೋಪ ಕೇಳಿಬರುತ್ತಿದೆ. ತಂದೆ ಮತ್ತು ಮಗ ಇಬ್ಬರ ವಿರುದ್ಧವೂ ಇದೀಗ ಹೊಳೆನರಸೀಪುರ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಷ್ಟೇ ಪ್ರಜ್ವಲ್​ ರೇವಣ್ಣ ವಿರುದ್ಧ ಮೊದಲ ಎಫ್​ಐಆರ್​ ದಾಖಲಾಗಿತ್ತು. ಇದೀಗ ತಂದೆಯ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಈ ಹಿಂದೆ ಎಚ್​.ಡಿ. ರೇವಣ್ಣ ಮನೆಯಲ್ಲಿ ಕೆಲಸ ಮಾಡಿದ್ದ ಮಹಿಳೆಯಿಂದಲೇ ದೂರು ದಾಖಲಾಗಿದೆ. ಭವಾನಿ ರೇವಣ್ಣ ಇಲ್ಲದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಡಿ, 506, 509ರಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.
ವಿಶೇಷ ತನಿಖಾ ತಂಡಹಾಸನದ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್​ಐಟಿ) ರಚಿಸಲಾಗಿದೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೋ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿವೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ಆದೇಶಿಸಿದೆ.
ಸಂತ್ರಸ್ತೆಯೊಬ್ಬಳು ನಿನ್ನೆಯಷ್ಟೇ (ಏಪ್ರಿಲ್​ 27) ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷೆ, ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದರು.
ವಿದೇಶಕ್ಕೆ ಹೋದರಾ ಪ್ರಜ್ವಲ್ ?:ಇನ್ನು ಒಂದೆಡೆ ವಿಡಿಯೋ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದ್ದಂತೆ, ಅತ್ತ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ. ಆದರೆ ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ? ಅಥವಾ ತನಿಖೆಗೆ ವಿಶೇಷ ತಂಡ ರಚನೆ ಆಗುತ್ತಿದೆ ಅಂತ ತಿಳಿದು ಹೋದರಾ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಸ್​​ಐಟಿ ತನಿಖೆಗೆ ಸಿಎಂ ಆದೇಶ, ವಿದೇಶಕ್ಕೆ ಹಾರಿದ್ರಾ ಹಾಸನ ಸಂಸದ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − five =
Remember me
