ವಿಜಯವಾಣಿ ಸುದ್ದಿಜಾಲ ಬೆಂಗಳೂರುರಾಜ್ಯ ಸರ್ಕಾರ ಕೋಮು ಗಲಭೆ ನಿಯಂತ್ರಣದ ಹೆಸರಿನಲ್ಲಿ ಹಿಂದುಗಳು ಹಾಗೂ ಹಿಂದು ಸಂಘಟನೆಗಳನ್ನು ಗುರಿಯಾಗಿಸಿ ದ್ವೇಷದ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುರುತ ಆರೋಪ ಮಾಡಿದ್ದಾರೆ.ಹಿಂದು ಸಂಘಟನೆಗಳ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಇವರಿಗೆ ಮಂಗಳೂರು ಪೊಲೀಸರು ಗಡಿಪಾರು ನೋಟಿಸ್ ನೀಡಿದ್ದಾರೆಂಬ ಮಾಹಿತಿ ಲಭಿಸಿದ್ದು, ಇದು ದ್ವೇಷ ರಾಜಕಾರಣದ ಪರಮಾವಧಿಯಾಗಿದೆ ಎಂದು ಟೀಕಿಸಿದ್ದಾರೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನಗಳ ಶಾಂತಿ ನೆಲೆಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಧರ್ಮ- ಧರ್ಮಗಳ ಮಧ್ಯೆ ದ್ವೇಷ ಹಚ್ಚಲು ಮುಂದಾಗಿದೆ. ಮಂಗಳೂರಿನಲ್ಲಿ ಕೋಮು ದ್ವೇಷ ನಿಯಂತ್ರಣ ಘಟಕ ಸ್ಥಾಪನೆ ಮಾಡಿರುವುದೇ ಹಿಂದು ಸಂಘಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಕೂಡಿದ್ದು, ಇದರ ವಿರುದ್ಧ ನಾವು ಕಾನೂನು ರೀತ್ಯ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.ಈ ಮೂವರಿಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬ ಬಗ್ಗೆ ಪೊಲೀಸ್ ಆಯುಕ್ತರು ಇದುವರೆಗೆ ಉತ್ತರ ನೀಡಿಲ್ಲ. ಸಿಎಂ ಸಿದ್ದರಾಮಯ್ಯನವರ ಕಣ್ಸನ್ನೆಗೆ ತಕ್ಕಂತೆ ಸ್ಪೀಕರ್ ಖಾದರ್ ಮಾತ್ರ ಕುಣಿಯುತ್ತಿದ್ದಾರೆ ಎಂದು ನಾವು ಭಾವಿಸಿದ್ದೆವು. ಆದರೆ ಇಡಿ ಪೊಲೀಸ್ ಇಲಾಖೆಯನ್ನು ತಮ್ಮ ಮತ ಬ್ಯಾಂಕ್ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ ಎಂದು ಕುಟುಕಿದ್ದಾರೆ.ಸಿದ್ದರಾಮಯ್ಯನವರ ಬೆಂಬಲದಿಂದ ಈ ಹಿಂದೆ ಪಿಎಫ್‌ಐ ಉಗ್ರರು ಹಿಂದು ಕಾರ್ಯಕರ್ತರ ಬರ್ಬರ ಹತ್ಯೆ ಮಾಡಿರುವುದು ನಮ್ಮ ಕಣ್ಣ ಮುಂದೆ ಇದೆ. ಹಿಂದಿನ ಘಟನೆಯನ್ನು ಸಿದ್ದರಾಮಯ್ಯ ಸರ್ಕಾರ ಮತ್ತೆ ಪುನರಾವರ್ತನೆ ಮಾಡಲು ಹೊರಟಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಮತ್ತು ಹೋರಾಟ ರೂಪಿಸುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − 1 =
Remember me
