ಹಾವೇರಿ:ಫೇಸ್​ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಬ್ಯುಸಿನೆಸ್ ಮಾಡುವ ನೆಪದಲ್ಲಿ ಯೋಗ ಶಿಕ್ಷಕರೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂ. ವಂಚಿಸಿದ ಕುರಿತು ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರೈಲು ದುರಂತಗಳನ್ನು ತಪ್ಪಿಸಲು ‘ಕವಚ್’ ಯೋಜನೆಗೆ 1.112 ಕೋಟಿ ರೂ.: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರ ಗ್ರಾಮದ ಮುತ್ತಪ್ಪ ಯಲ್ಲಪ್ಪ ಉಮಚಗಿ (34) ಮೋಸ ಹೋದವರು.
ಇವರು ಯೋಗ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಕ್ಯೂರಿ ಎನ್ನುವ ಯುವತಿ ಸಾಮಾಜಿಕ ಜಾಲತಾಣವಾದ ಫೇಸ್​ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದಾಳೆ. ಯುಕೆಯಲ್ಲಿರುವ ನಮ್ಮ ಬ್ಯೂರಿಕ್ ಗೋಲ್ಡ್ ಕ್ಯಾಪಿಟಲ್ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಇಬ್ಬರು ಕಂಪನಿಗೆ ಮಾಲೀಕರಾಗಿ ಬಂದ ಲಾಭವನ್ನು ಹಂಚಿಕೊಳ್ಳಬಹುದು ಎಂದು ನಂಬಿಸಿದ್ದಾಳೆ. ನಂತರ ಮುತ್ತಪ್ಪ ಅವರಿಂದ 30 ಲಕ್ಷ ರೂ. ಆಕೆಯ ವಿವಿಧ ಖಾತೆಗಳಿಗೆ ಹಾಕಿಸಿಕೊಂಡು ಮೋಸ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾರಿನ ಬಾನೆಟ್ ಮೇಲೆ ಕುಳಿತಿದ್ದ ‘ಸ್ಪೈಡರ್‌ ಮ್ಯಾನ್‌’ನನ್ನು ಬಂಧಿಸಿದ ದೆಹಲಿ ಪೊಲೀಸರು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + twenty =
Remember me
