ಹಾವೇರಿ:ಅಸಹಾಯಕ ರೈತನೊಬ್ಬ ಲಂಚ ನೀಡಲು ಹಣವಿಲ್ಲದ ಕಾರಣ ತನ್ನ ದುಡಿಮೆಯ ಎತ್ತನ್ನೇ ಲಂಚವಾಗಿ ನೀಡಲು ಪುರಸಭೆ ಕಚೇರಿಗೆ ತೆರಳಿದ ಮನಕಲಕುವ ಹಾಗೂ ಆಘಾತಕಾರಿ ಘಟನೆ ಹಾವೇರಿಯ ಸವಣೂರಿನ ಪುರಸಭೆಯಲ್ಲಿ ನಡೆದಿದೆ.
ಮನೆ ಖಾತೆ ಬದಲಾಯಿಸಲು 25,000 ಸಾವಿರ ರೂ. ಲಂಚ ನೀಡುವಂತೆ ಪುರಸಭೆ ಅಧಿಕಾರಿಗಳು ಯಲ್ಲಪ್ಪ ರಾಣೋಜಿ ಎಂಬ ರೈತನಿಗೆ ಕೇಳಿದ್ದರು. ಈ ಹಿಂದೆಯು ಹಣವನ್ನು ಕೊಟ್ಟಿದ್ದೇನೆ. ಹಣ ತೆಗೆದುಕೊಂಡವರು ವರ್ಗಾವಣೆ ಆಗಿದ್ದಾರೆ. ಈಗ ಹೊಸದಾಗಿ ಬಂದಿರುವ ಅಧಿಕಾರಿಗಳು ಮತ್ತೆ 25,000 ಸಾವಿರ ಹಣ ಕೊಡಿ ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ.
ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ನರೇಶ್-ಪವಿತ್ರಾ! ರಮ್ಯಾ ಸಂಬಂಧಕ್ಕೆ ಫುಲ್​ಸ್ಟಾಪ್ ಇಟ್ಟು ಹೊಸ ಜೀವನ ಆರಂಭ
ಅಧಿಕಾರಿಗಳ ಹಣ ದಾಹದ ವರ್ತನೆಯಿಂದ ರೊಚ್ಚಿಗೆದ್ದ ಅನ್ನದಾತ ತಮ್ಮ ಎತ್ತಿನ ಸಮೇತ ಪುರಸಭೆ ಕಚೇರಿಗೆ ಬಂದರು. ಬಳಿಕ ಅಧಿಕಾರಿಗಳ ಬಳಿ ಹೋಗಿ ದುಡ್ಡು ಕೊಡುವತನಕ ಎತ್ತು ಇಟ್ಕೊಳಿ ಎಂದು ಹೇಳಿದರು. ಸಾರ್ ನನ್ನ ಬಳಿ ನೀವು ಕೇಳಿದಷ್ಟು ಕೊಡುವುದಕ್ಕೆ ಹಣ ಇಲ್ಲ. ಅಲ್ಲಿಯವರೆಗೆ ಈ ಎತ್ತನ್ನು ನಿಮ್ಮ ಜೊತೆ ಇಟ್ಟುಕೊಳ್ಳಿ ಎಂದಿದ್ದಾನೆ. ಇದನ್ನು ಕೇಳಿದ ಪುರಸಭೆ ಅಧಿಕಾರಿಗಳು ಒಂದು ಕ್ಷಣ ದಂಗಾಗಿದ್ದಾರೆ.
ರೈತ ಯಲ್ಲಪ್ಪನ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಯಲ್ಲಪ್ಪ ಸರಿಯಾಗಿಯೇ ಬುದ್ಧಿ ಕಲಿಸಿದ್ದಾನೆಂದು ಸಾರ್ವಜನಿಕರು ಪ್ರಶಂಸೆಗಳ ಸುರಿಮಳೆಗೈದಿದ್ದಾರೆ. (ದಿಗ್ವಿಜಯ ನ್ಯೂಸ್​)
ಬಿಜೆಪಿ ಚುನಾವಣಾ ಪ್ರಚಾರಕ್ಕೆ ಬೊಮ್ಮಾಯಿ‌, ನಿರ್ವಹಣೆಗೆ ಶೋಭಾ ಕರಂದ್ಲಾಜೆ ಸಾರಥ್ಯ

ತನಿಖಾ ತಂಡದ ಮುಂದೆ ಕೊನೆಗೂ ಕಳಚಿಬಿತ್ತು ಗ್ಲಾಮರಸ್​ ಕೃಷಿ ಅಧಿಕಾರಿಯ ಮುಖವಾಡ!

‘ಅವರಿಗೆ ಟಿಕೆಟ್​ ಕೊಟ್ಟಿಲ್ಲ ಎಂದರೆ ನಾನೂ ನಿಲ್ಲಲ್ಲ’ ಎಂದ ರಮೇಶ್ ಜಾರಕಿಹೊಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
