ಬೆಂಗಳೂರು:ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂನ್ 13) ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್​ ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್​ ನೀಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.
ಇದನ್ನೂ ಓದಿ:ರೇಣುಕಸ್ವಾಮಿ ಹತ್ಯೆ ಕೇಸ್​; ತನಿಖಾಧಿಕಾರಿ ದಿಢೀರ್​ ವರ್ಗಾವಣೆ
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ. ಎಸ್.​ ದೀಕ್ಷಿತ್​​​​​ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಜೂನ್​ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಯಡಿಯೂರಪ್ಪ ಅವರು ತಮ್ಮ ವಕೀಲರ ಮೂಲಕ ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಿಸಿರುವ ದೂರು, ಎಫ್​ಐಆರ್ ಮತ್ತು ಪೋಕ್ಸೋ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್​ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಬಂಧಿಸಬಾರದು ಎಂದು ಹೈಕೋರ್ಟ್​ ಆದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 13 =
Remember me
