ಬೆಂಗಳೂರು:ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿ ಅಸೀಂ ಶರೀಫ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಜಾಮೀನು ನಿರಾಕರಿಸಿ ಕಳೆದ ಸೆ.8ರಂದು ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಪ್ರಶ್ನಿಸಿ ಆಸೀಂ ಶರೀಫ್ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿ ಗಮನಿಸಿದ ಪೀಠ, ವಿಚಾರಣಾ ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಗಣಿಸಿ ಜಾಮೀನು ನಿರಾಕರಿಸಿದೆ. ಅದೇ ಅಂಶಗಳ ಮೇಲೆ ಮತ್ತೆ ವಿಚಾರಣೆ ನಡೆಸುವ ಅಗತ್ಯವಿಲ್ಲ. ಹೃದ್ರೋಗದ ಕಾರಣ ನೀಡಿ ಜಾಮೀನು ಕೇಳಲಾಗಿದೆ. ಆದರೆ, ಸೆ.6ರಂದು ಜಯದೇವ ಹೃದ್ರೋಗ ಸಂಸ್ಥೆ ನೀಡಿರುವ ವರದಿಯಲ್ಲಿ ಆರೋಪಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಆದ್ದರಿಂದ, ಮೇಲ್ಮನವಿಗೆ ವಿಚಾರಣಾ ಮಾನ್ಯತೆ ಇಲ್ಲ ಎಂದು ಹೇಳಿತು.
ಆದರೆ, ಅಸೀಂ ಶರೀಫ್ ಪರ ವಕೀಲರು ವಾದ ಮಂಡನೆಗೆ ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದರು. ಇದರಿಂದ, ಎನ್‌ಐಎಗೆ ನೋಟಿಸ್ ಜಾರಿಗೊಳಿಸಿದ ಪೀಠ, ವಿಚಾರಣೆಯನ್ನು ಡಿ.14ಕ್ಕೆ ಮುಂದೂಡಿತು.
ಆರೋಪಿಯ ಮನವಿ ಏನು?:ಹತ್ಯೆ ಪ್ರಕರಣದಲ್ಲಿ ತನ್ನ ಯಾವುದೇ ಪಾತ್ರವಿಲ್ಲ. ಚಿಕ್ಕ ವಯಸ್ಸಿನ ಮೂವರು ಹೆಣ್ಣು ಮಕ್ಕಳು, ವೃದ್ಧ ತಾಯಿ ಇದ್ದಾರೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವುದಲ್ಲದೆ, ಜೈಲಿನಲ್ಲಿ ಹೃದಯಾಘಾತವಾಗಿತ್ತು. ಕೋವಿಡ್ ಪಾಸಿಟಿವ್ ಸಹ ಆಗಿತ್ತು. ಆದ್ದರಿಂದ, ಅನಾರೋಗ್ಯದ ಕಾರಣಗಳನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕು ಎಂದು ಆರೋಪಿ ತನ್ನ ಮೇಲ್ಮನವಿಯಲ್ಲಿ ಕೋರಿದ್ದಾನೆ.
ಚಾರ್ಜ್‌ಶೀಟ್ ಸಲ್ಲಿಕೆ ಅವಧಿ ವಿಸ್ತರಣೆ ಪ್ರಶ್ನಿಸಿ ಮೇಲ್ಮನವಿ:ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ದೋಷಾರೋಪ ಪಟ್ಟಿ ಸಲ್ಲಿಕೆ ಅವಧಿಯನ್ನು 90 ರಿಂದ 180 ದಿನಗಳಿಗೆ ವಿಸ್ತರಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಆರೋಪಿಗಳಾದ ಕಲೀಂ ಪಾಷಾ ಮತ್ತಿತರರು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಎನ್‌ಐಎಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಚಾರ್ಜ್‌ಶೀಟ್ ಸಲ್ಲಿಕೆ ಅವಧಿ ವಿಸ್ತರಿಸುವಾಗ ಎನ್‌ಐಎ ವಿಶೇಷ ನ್ಯಾಯಾಲಯ ಮೇಲ್ಮನವಿದಾರರಿಗೆ ನೋಟಿಸ್ ನೀಡಿ, ಅವರ ವಾದ ಆಲಿಸಿಲ್ಲ. ಎನ್‌ಐಎ ವಿಶೇಷ ಅಭಿಯೋಜಕರ ಮನವಿ ಪರಿಗಣಿಸಿ ಚಾರ್ಜ್‌ಶೀಟ್ ಸಲ್ಲಿಕೆ ಅವಧಿಯನ್ನು 90ರಿಂದ 180 ದಿನಗಳಿಗೆ ವಿಸ್ತರಿಸಿ ನ.3ರಂದು ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.
ಎನ್‌ಐಎ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನಕುಮಾರ್, ಜಾರ್ಜ್‌ಶೀಟ್ ಸಲ್ಲಿಕೆಯ 90 ದಿನಗಳ ಅವಧಿ ಪೂರ್ಣಗೊಳ್ಳುವ ಮೊದಲೇ ಮತ್ತೆ 90 ದಿನಗಳಿಗೆ ವಿಸ್ತರಿಸಿಕೊಳ್ಳಲು ಕಾನೂನುಬಾಹಿರ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆಯಲ್ಲಿ (ಯುಎಪಿಎ) ಅವಕಾಶವಿದೆ. ಈ ಪ್ರಕರಣದಲ್ಲಿ ಮೊದಲ 90 ದಿನಗಳು ಮುಗಿಯುವ ಮೊದಲೇ ಅವಧಿ ವಿಸ್ತರಣೆಗೆ ಮನವಿ ಮಾಡಲಾಗಿತ್ತು. ಅದನ್ನು ಪರಿಗಣಿಸಿ ವಿಚಾರಣಾ ನ್ಯಾಯಾಲಯ ಅವಧಿ ವಿಸ್ತರಿಸಿದೆ. 90 ದಿನ ಮುಗಿದ ನಂತರ ಅವಧಿ ವಿಸ್ತರಿಸುವಂತಿದ್ದರೆ ಮಾತ್ರ ಆರೋಪಿಗಳಿಗೆ ನೋಟಿಸ್ ಕೊಡಬೇಕಾಗುತ್ತದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 3 =
Remember me
