ಮೈಸೂರು:ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೊಸ ಬಾಂಬ್​ ಒಂದನ್ನು ಸಿಡಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಚ್​.ಸಿ.ಮಹದೇವಪ್ಪ ಅಧಿಕಾರಿ ಹಂಚಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎನ್ನುವುದರ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.
ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಕುರಿತು ಪ್ರತಿಕ್ರಿಯಿಸಿ ಗೃಹ ಸಚಿವ ಪರಮೇಶ್ವರ್​ ಹೇಳಿರುವುದರಲ್ಲಿ ತಪ್ಪೇನಿಲ್ಲ. ತುಳಿತಕ್ಕೆ ಒಳಗಾದವರಿಗೆ ಅವಾಕಶ ದೊರೆಯಬೇಕು. ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ ಎಂದು ಪರೋಕ್ಷವಾಗಿ ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:VIDEO| ಕಂದಮ್ಮನನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡಿದ ತಾಯಿ ಆನೆ
ಮುಚ್ಚಿರುವ ಎಲ್ಲಾ ಇಂದಿರಾ ಕ್ಯಾಂಟೀನ್ಗಳನ್ನು ತೆರೆಯುವುದು ನಮ್ಮ ಸದ್ಯದ ಉದ್ಧೇಶವಾಗಿದೆ. ಅಲ್ಲಿ ಮಾಂಸಹಾರ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಬೇಕಿದ್ದರೆ ಅಲ್ಲಿಗೆ ತಂದು ತಿನ್ನಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಬಡಜನರು ಹಾಗೂ ಕಾರ್ಮಿಕರಿಗೆ ಅನುಕೂಲವಾಗುವಂತೆ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟೀನ್‌ಅನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಮಾಂಸಾಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
