ಮೈಸೂರು:ಯುವ ಬ್ರಿಗೇಡ್​ ಸಂಚಾಲಕ ವೇಣುಗೋಪಾಲ್​ ಹತ್ಯೆ ಪ್ರಕರಣವು ಧರ್ಮ ಹಾಗೂ ರಾಜಕೀಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್​.ಸಿ. ಮಹದೇವಪ್ಪ ಹೇಳಿದ್ದಾರೆ.
ತಿ. ನರಸೀಪುರದಲ್ಲಿ ವೇಣುಗೋಪಾಲ್​ ಕುಟುಂಬಸ್ಥರನ್ನು ಭೇಟಿ ಮಾಡಿ ಪರಿಹಾರದ ಚೆಕ್​ ನೀಡಿದ ಬಳಿಕ ಮಾತನಾಡಿದ ಮಹದೇವಪ್ಪ ಬಿಜೆಪಿಯವರು ವಿನಾಕಾರಣ ನನ್ನ ಮಗ ಸುನೀಲ್​ ಬೋಸ್​ ಹೆಸರನ್ನು ಎಳೆದು ತರುತ್ತಿದ್ದಾರೆ ಎಂದು ಆರೊಪಿಸಿದ್ದಾರೆ.
ವೇಣುಗೋಪಾಲ್​​ ಯುವ ಬ್ರಿಗೇಡ್​ ಸಂಘಟನೆಯನ್ನು ಕಟ್ಟಿಕೊಂಡು ಹನುಮ ಜಯಂತಿ ಆಚರಣೆಯನ್ನು ಚೆನ್ನಾಗಿಯೇ ಮಾಡಿದ್ದಾರೆ. ಅದಕ್ಕೆ ಯಾವ ತಕರಾರು ಇಲ್ಲ. ಅವರ ಸಂಘಟನೆಯ ಸದಸ್ಯರೇ ನಡುವೆಯೇ ಬೈಕ್​ ನಿಲ್ಲಿಸುವ ಹಾಗೂ ಫೋಟೋ ಹಾಕುವ ವಿಚಾರಕ್ಕೆ ಗಲಾಟೆಯಾಗಿ ಹತ್ಯೆಯಾಗಿದೆ.
ಇದನ್ನೂ ಓದಿ:VIDEO| ರೈಲಿನಲ್ಲಿ ಚಪ್ಪಲಿ ಹಿಡಿದು ಬಡಿದಾಡಿಕೊಂಡ ಮಹಿಳೆಯರು
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿಂದುತ್ವದ ಕಾರ್ಯಸೂಚಿಯನ್ನು ಹಬ್ಬಿಸಲು ಯತ್ನಿಸುತ್ತಿದೆ. ಈ ಆಟ ಬಹಳ ದಿನ ನಡೆಯುವುದಿಲ್ಲ. ಸುಳ್ಳನ್ನು ಸತ್ಯ ಮಾಡಲು ಹೊರಟ್ಟಿದ್ದಾರೆ. ನನ್ನ ಮಗ ಸುನೀಲ್​ ಬೋಸ್​ ವಿರುದ್ಧ ಈ ಹಿಂದೆ ಸುಮ್ಮನೆ ಆರೋಪ ಮಾಡಿದ್ದರು ಎಂದು ಕಿಡಿಕಾರಿದ್ದಾರೆ.
ಪೊಲೀಸ್​ ತನಿಖೆ ಸರಿಯಾದ ದಾರಿಯಲ್ಲಿದ್ದು, ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಯವರು ಧರ್ಮದ ಬಣ್ಣ ಬಳಿಯಲು ಮುಂದಾಗಿದ್ದಾರೆ. ವೇಣುಗೋಪಾಲ್​ ಪತ್ನಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಕೊಡಿಸುವ ಕುರಿತು ಪ್ರಯತ್ನಿಸುತ್ತೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್​.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
