ಬೆಂಗಳೂರು : ಮೈಸೂರಿನಲ್ಲಿ ಕಳೆದ ವರ್ಷ ನಡೆದಿದ್ದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣ ದುರುಪಯೋಗ ನಡೆದಿದೆ ಎಂಬ ಆರೋಪ ಸಂಬಂಧ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆ ರದ್ದುಪಡಿಸುವಂತೆ ಕೋರಿ ಕೆಎಸ್‌ಬಿಸಿ ಅಧ್ಯಕ್ಷ ಎಚ್.ಎಲ್. ವಿಶಾಲ್ ರಘು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ.
ಮತ್ತೊಂದೆಡೆ ಇದೇ ಆರೋಪ ಸಂಬಂಧ ವಿಚಾರಣೆ ನಡೆಸಲು ಭಾರತೀಯ ವಕೀಲರ ಪರಿಷತ್ (ಬಿಸಿಐ) ರಚಿಸಿರುವ ಮೂವರು ಸದಸ್ಯರ ಸಮಿತಿಗೆ ಹೈಕೋರ್ಟ್‌ನ ಮತ್ತೊಂದು ನ್ಯಾಯಪೀಠ ತಡೆಯಾಜ್ಞೆ ನೀಡಿದೆ.
ಪರಿಷತ್ ವತಿಯಿಂದ ಮೈಸೂರಿನಲ್ಲಿ 2023ರ ಆ.12 ಮತ್ತು 13ರಂದು ಎರಡು ದಿನಗಳ ಕಾಲ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದ ಪ್ರತಿನಿಧಿ ವಕೀಲರಿಂದ ತಲಾ ಒಂದು ಸಾವಿರ ರೂ.ನಂತೆ 1,16,33,000 ರೂ ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು. ರಾಜ್ಯ ಸರ್ಕಾರ 1 ಕೋಟಿ 8 ಲಕ್ಷ ರೂ. ಅನುದಾನ ನೀಡಿತ್ತು. ರಾಜ್ಯ ವಕೀಲರ ಪರಿಷತ್‌ನಿಂದ 75 ಲಕ್ಷ ರೂ. ಬಿಡುಗಡೆಯಾಗಿತ್ತು. ಒಟ್ಟು ಮೊತ್ತ 3,30,33,000 ಸಂಗ್ರಹವಾಗಿತ್ತು. ಈ ಹಣ ಪರಿಷತ್ ಬ್ಯಾಂಕ್ ಖಾತೆಗೆ ಜಮೆ ಆಗಿದೆ.
ಈ ಹಣದ ಪೈಕಿ 50 ಲಕ್ಷ ರೂ. ಅನ್ನು ಬ್ಯಾಂಕಿಂದ ನಗದೀಕರಿಸಿಕೊಂಡು ಸುಳ್ಳು ಲೆಕ್ಕಪತ್ರ ಸೃಷ್ಟಿಸಲಾಗಿದೆ. ಜತೆಗೆ, ವಕೀಲರ ಸಮುದಾಯಕ್ಕೆ ಸೇರಿದ ಕೋಟ್ಯಂತರ ರೂಪಾಯಿಯನ್ನು, ನಕಲಿ ಬಿಲ್ ತಯಾರಿಸಿ ಸ್ವಂತಕ್ಕೆ ಬಳಸಿಕೊಳ್ಳುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.
ಈ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಜುರುಗಿಸಬೇಕು ಎಂದು ಆರೋಪಿಸಿ ಕೆಎಸ್‌ಪಿಸಿಬಿ ಸದಸ್ಯರೇ ಆದ ಹಿರಿಯ ವಕೀಲ ಎಸ್. ಬಸವರಾಜ್ ದೂರು ದಾಖಲಿಸಿದ್ದರು. ಅದನ್ನು ಆಧರಿಸಿ ಪರಿಷತ್ ಅಧ್ಯಕ್ಷ ವಿಶಾಲ ರಘು ಮತ್ತಿತರರ ವಿರುದ್ಧ ವಿಧಾನಸೌಧ ಠಾಣಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty + sixteen =
Remember me
