ಬೆಂಗಳೂರು:ಸಾರ್ವಜನಿಕರ ವಿರುದ್ದ ಸುಳ್ಳು ಪ್ರಕರಣ ದಾಖಲಿಸಿ ಬೆದರಿಕೆ ಹಾಕುತ್ತಿರುವ ಆರೋಪದಡಿ ಮೂವರು ಇನ್ಸ್​ಪೆಕ್ಟರ್​​ಗಳ​ ವಿರುದ್ದ ಮಾಜಿ‌ ಪ್ರಧಾನಿ ದೇವೇಗೌಡ ಅವರು ರಾಜ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ.
ಕಗ್ಗಲಿಪುರ ಠಾಣೆ ಇನ್ಸ್​ಪೆಕ್ಟರ್ ವಿಜಯಕುಮಾರ್, ತಾವರೆಕೆರೆ ಠಾಣೆ ಇನ್ಸ್​ಪೆಕ್ಟರ್ ರಾಮಪ್ಪ ಗುತ್ತೆದಾರ್ ಹಾಗೂ ತಲಘಟ್ಟಪುರ ಇನ್ಸ್​ಪೆಕ್ಟರ್ ಜಗದೀಶ್ ಅವರನ್ನು ಎತ್ತಂಗಡಿ ಮಾಡುವಂತೆ ಮಾಜಿ ಪ್ರಧಾನಿ ದೂರು ನೀಡಿದ್ದಾರೆ.
ಇದನ್ನೂ ಓದಿ:ಬಿಜೆಪಿಯಲ್ಲಿ ಇರುವವರು ಕಾಳಸಂತೆಕೋರರು, ಬೆಟ್ಟಿಂಗ್​ ದಂಧೆಕೋರರು: ಎಚ್​.ಡಿ.ಕುಮಾರಸ್ವಾಮಿ ಆರೋಪ
ಯಶವಂತಪುರ ಶಾಸಕ ಹೇಳಿದಂತೆ ಮೂವರು ಇನ್ಸ್​ಪೆಕ್ಟರ್​ಗಳು ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಯಶವಂತಪುರ ಕ್ಷೇತ್ರದಲ್ಲಿ ಶಾಸಕರ ಪರವಾಗಿ ಮತ ಹಾಕುವಂತೆ ಬೆದರಿಕೆ ಹಾಕುತ್ತಿದ್ದಾರೆ. ಜನರ ವಿರುದ್ದ ಸುಳ್ಳು ಕೇಸ್ ಹಾಕಿ ದೌರ್ಜನ್ಯ ಎಸಗುತ್ತಿದ್ದಾರೆ. ಹೀಗಾಗಿ ಕೂಡಲೇ ಮೂವರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ದೂರಿನ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.
ಸ್ಥಳೀಯ ಶಾಸಕರೊಂದಿಗೆ ಒಡನಾಟ ಹೊಂದಿರುವ ಮೂವರು ಇನ್ಸ್​ಪೆಕ್ಟರ್​ಗಳನ್ನು ವಿಧಾನಸಭಾ ಚುನಾವಣಾ ಹಿತದೃಷ್ಠಿಯಿಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಬೇರೆಡೆಗೆ ವರ್ಗಾಯಿಸಬೇಕು. ಸೂಕ್ತ ಅಧಿಕಾರಿಗಳನ್ನು ನೇಮಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:‘ಮಡಕೆ’ ಬಿಬಿಕೆಪಿ ಪಕ್ಷದ ಚಿಹ್ನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
