ಬೆಂಗಳೂರು:ನಾಡಪ್ರಭು ಕೆಂಪೇಗೌಡರ ಪ್ರತಿಮೆ (Kempegowda Statue) ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (HD Deve Gowda) ಅವರಿಗೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಮಾಡಿದ್ದ​ ಆರೋಪಕ್ಕೆ ಆಹ್ವಾನ ಪತ್ರದ ಮೂಲಕ ಬಿಜೆಪಿ (BJP) ತಿರುಗೇಟು ನೀಡಿತ್ತು. ಇದೀಗ ಮತ್ತೊಮ್ಮೆ ಸರಣಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಜೆಡಿಎಸ್ (JDS)​ ವಾಗ್ದಾಳಿ ನಡೆಸಿದೆ.
ಸರಣಿ ಟ್ವೀಟ್​ ಮಾಡುವ ಮೂಲಕ ಟ್ವೀಟ್​ ವಾರ್ ಮುಂದುವರಿಸಿರುವ ಜೆಡಿಎಸ್‌, ನಾಡಪ್ರಭು ಕೆಂಪೇಗೌಡರ ಕಾರ್ಯಕ್ರಮಕ್ಕೆ ದೇವೆಗೌಡರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸಬೇಕೇ ಹೊರತು ಬಿಜೆಪಿಯಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ ಎಂದು ಕಿಡಿಕಾರಿದೆ.
ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಜೆಡಿಎಸ್​ ಹರಿಹಾಯ್ದಿದೆ.
ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರ ಮೋದಿ ಅವರ ಅರ್ಧದಿನದ ಕರ್ನಾಟಕದ ಕಾಟಾಚಾರದ ಭೇಟಿ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ. ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ಮಹಾ ಅಪರಾಧ ಎಂದು ಚಿತ್ರಿಸುತ್ತಿರುವ ಬಿಜೆಪಿ, ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ?
ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ. ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ಭೂತದ ಬಾಯಲ್ಲಿ ಭಗದ್ಗೀತೆ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
20 ದಿನಗಳ ಹಿಂದೆ ಸಚಿವ ಅಶ್ವಥನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ, ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ. ಬಿಜೆಪಿ, ಗೊಬೆಲ್ ಸಂತತಿಯ ಶಿಶು ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ಸುಳ್‌ ಬಿಜೆಪಿಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸುಳ್‌ ಸಿಎಂ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ?
ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ಗೊಬೆಲ್‌ ಬಿಜೆಪಿಗೆ ಗರ ಬಡಿದಿದೆಯಾ? ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ, ಪ್ರತಿಮಾ ಪಥ, ಮೋದಿ ರಥ ಎನ್ನುವ ಸುದ್ದಿಗಳನ್ನು ಬಿಜೆಪಿ ನೋಡಲಿಲ್ಲವೇ?
ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ಕುಲ ಕುಲವೆಂದು ಹೊಡೆದಾಡದಿರಿ ಪದವನ್ನು ಹೇಳುತ್ತಲೇ ಕುಲಕಿಚ್ಚಿನ ರಾಜಕೀಯ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಕೊನೆಯದಾಗಿ, ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಕರ್ನಾಟಕ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ ಎಂದು ಜೆಡಿಎಸ್​ ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ.
ಪ್ರಗತಿಯ ಪ್ರತಿಮೆ ಅನಾವರಣ ಹೈವೋಲ್ಟೇಜ್ ರಾಜಕಾರಣ; ಮೂರೂ ಪಕ್ಷಗಳಿಂದ ಏಟು-ತಿರುಗೇಟು

ಆರ್​ಟಿಐಗೂ ಬಗ್ಗದ ಭ್ರಷ್ಟರು; ಮಾಹಿತಿ ಕೊಡಲು ಅಧಿಕಾರಿಗಳ ಕಳ್ಳಾಟ | ನೆಪವೊಡ್ಡಿ ಅರ್ಜಿಗಳ ತಿರಸ್ಕಾರ

ಮತ್ತೊಮ್ಮೆ ಚರ್ಚ್​​ಗೆ ಬರ್ತೀನಿ… ಕೋಲಾರದಿಂದ ಸ್ಪರ್ಧಿಸುವ ಸುಳಿವು ಬಿಟ್ಟುಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
