ಬೆಂಗಳೂರು:ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಇಂದು 92ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತನೊಬ್ಬ ತನ್ನ ನೆಚ್ಚಿನ ನಾಯಕನಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ. ಈ ವೇಳೆ ಪಕ್ಷದ ಕಾರ್ಯಕರ್ತನೊಬ್ಬ ತನ್ನ ನೆಚ್ಚಿನ ನಾಯಕನಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ದೇವೇಗೌಡರು ಅದರ ಪರಿಮಳವನ್ನು ಆಸ್ವಾದಿಸಿ ಖುಷಿಪಟ್ಟರು. ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.
ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 4 =
Remember me
