ಮೈಸೂರು:ಚುನಾವಣೆ ಮುಗಿಯುವವರೆಗೂ ಪ್ರತಿದಿನ ಮೂರು ಕಡೆ ಪ್ರಚಾರ ಮಾಡುತ್ತಾ, ರಾಜ್ಯದ ಎಲ್ಲಾ ಭಾಗಗಳಿಗೂ ಭೇಟಿ ನೀಡುತ್ತೇನೆ. ಒಟ್ಟು 42 ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ಸುಧಾರಿಸಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ,ದೇವೇಗೌಡ ಹೇಳಿದ್ದಾರೆ.
ಪಿರಿಯಾಪಟ್ಟಣದಲ್ಲಿ ಎಚ್.ಡಿ. ದೇವೇಗೌಡ ಮಾತನಾಡುತ್ತಾ, ನಮ್ಮಲ್ಲೂ ಸ್ಟಾರ್ ಕ್ಯಾಂಪೇನರ್ ಇದ್ದಾರೆ. ಪ್ರತಿಯೊಬ್ಬ ನಾಯಕರೂ ಅವರವರ ಭಾಗದಲ್ಲಿ ಜೆಡಿಎಸ್ ಗೆಲುವಿಗೆ ಶ್ರಮಿಸಲಿದ್ದಾರೆ. ಪಂಚರತ್ನ ಯೋಜನೆ ಜನರಿಗೆ ಸಹಕಾರಿ ಆಗಲಿದೆ. ಕೊಟ್ಟ ಮಾತು ಉಳಿಸಿಕೊಂಡಿರುವ ಕುಮಾರಸ್ವಾಮಿ ಬಗ್ಗೆ ಜನರಿಗೆ ವಿಶ್ವಾಸ ಇದೆ. ಜೆಡಿಎಸ್‌ ಬಹುಮತ ಪಡೆದು ಸ್ವತಂತ್ರ ಸರ್ಕಾರ ರಚನೆ ಮಾಡಲಿದೆ ಎಂದರು.
ಇದನ್ನೂ ಓದಿ:ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್ ಸಂತೋಷ್; ಸಿದ್ದರಾಮಯ್ಯ ಸೋಲಿಸಲು ಕಾರ್ಯತಂತ್ರ!
ಮುಸ್ಲಿಂ ಮೀಸಲಾತಿ ರದ್ದು ವಿಚಾರವಾಗಿ ಪ್ರತಿಕ್ರಿಯಿಸಿ, ಮುಸ್ಲಿಮರಿಗೆ ಮೀಸಲಾತಿ ಕೊಟ್ಟವನು ನಾನು ಇಲ್ಲೆ ಇದ್ದೇನೆ. ನಿಮ್ಮ ಮುಂದೆಯೇ ಬದುಕಿದ್ದೇನೆ. ಈದ್ಗಾ ಮೈದಾನ ವಿವಾದ ಬಗೆಹರಿಸಿದ್ದು ನಾನು. ಹೆಣ್ಣು ಮಕ್ಕಳಿಗೆ ಮೀಸಲಾತಿ ಕೊಟ್ಟಿದ್ದೇನೆ. ಜನಗಳಿಗೆ ಈ ಬಗ್ಗೆ ನೆನಪು ಮಾಡಬೇಕಷ್ಟೇ ಎಂದರು.
75 ವರ್ಷಗಳಲ್ಲಿ ಆಗದ ಕಾರ್ಯಕ್ರಮಗಳನ್ನು ಕುಮಾರಸ್ವಾಮಿ ಇತ್ತೀಚೆಗೆ ಮಾಡಿದ್ದಾರೆ. ಗ್ರಾ.ಪಂ ಮಟ್ಟದಲ್ಲಿ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ನಿರುದ್ಯೋಗ, ಆರೋಗ್ಯ, ಶಿಕ್ಷಣ, ವಸತಿ ಹೀಗೆ ಹಲವು ವಿಷಯಗಳಲ್ಲಿ ಉತ್ತಮ ಕಾರ್ಯಕ್ರಮ ರೂಪಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ 2 ಬಾರಿ ಮುಖ್ಯಮಂತ್ರಿ ಆಗಿದ್ದಾಗ ಅಡೆತಡೆ ಮಾಡಿದ್ದರು. ಆದರೂ ಅವೆಲ್ಲನ್ನು ಮೆಟ್ಟಿನಿಂತು ಉತ್ತಮ ಕೆಲಸ‌ ಮಾಡಿದ್ದಾರೆ. ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸಂಪೂರ್ಣ ಅಧಿಕಾರ ಕೊಡಿ ಎಂದು ಮತದಾರರಲ್ಲಿ ದೇವೇಗೌಡ ಅವರು ವಿನಿಂತಿಸಿಕೊಂಡರು.
ಇದನ್ನೂ ಓದಿ:ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twenty =
Remember me
