ಮೈಸೂರು:ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿದಿನ ಪಟ್ಟಿ ಬದಲಾವಣೆ ಆಗುತ್ತದೆ ಎಂದು ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ಹೇಳಿದರು. ಪತ್ನಿ ಜತೆ ಗುರುವಾರ ನಂಜನಗೂಡು ನಂಜುಂಡೇಶ್ವರನ ದರ್ಶನಕ್ಕೆ
ತೆರಳುತ್ತಿದ್ದ ದೇವೇಗೌಡರು ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ ಎಂದರು. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರೇ ತೀರ್ಮಾನ ಮಾಡುತ್ತಾರೆ ಎಂದರು.
ಎಚ್​.ಡಿ. ಕುಮಾರಸ್ವಾಮಿ ಸೇರಿದಂತೆ ನಮ್ಮ ಪಕ್ಷದ ನಾಯಕರೆಲ್ಲರೂ “ಪಂಚರತ್ನ” ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿಗಳಲ್ಲೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ನಾನೂ ಪ್ರಚಾರಕ್ಕೆ ಹೋಗುತ್ತೇನೆ ಎಂದು ದೇವೇಗೌಡ ಹೇಳಿದರು.

ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜತೆ ಮಾತನಾಡಿದ್ದಾರೆ. ದ್ವಂದ ಇದೆ. ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದ ದೇವೇಗೌಡರು, ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್​. ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿ ಎಷ್ಟಿದೆ ಎನ್ನುವುದು ತಿಳಿದಿದೆ. ಇದಕ್ಕೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಅವರ ಯಾವ ಹೆದರಿಕೆಗೂ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.
ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

ಶಾಮಿಯಾನದ ಕಂಬ ಮುಟ್ಟಿದ ವಿದ್ಯಾರ್ಥಿ ಸಾವು: ಈಜು ಸ್ಪರ್ಧೆಗೆ ರಾಮನಗರಕ್ಕೆ ಆಗಮಿಸಿದ್ದವ ದುರಂತ ಅಂತ್ಯ

ತುಮಕೂರಲ್ಲಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ: ಸಿದ್ಧಗಂಗಾ ಮಠಕ್ಕೆ ಎಚ್​ಡಿಕೆ ಭೇಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fifteen =
Remember me
