ಹಾಸನ:ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲಾಗಿದೆ. ಅಲ್ಲಿಂದ ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಚಲಾವಣೆ ಮಾಡಿದ್ದಾರೆ.
ಇದನ್ನೂ ಓದಿ:ಮತದಾನ ಮಾಡಿದ ರಕ್ಷಿತ್ ಶೆಟ್ಟಿ; ಪಕ್ಷದ ಮೇಲೆ ಒಲವಿದೆ, ಪ್ರಚಾರಕ್ಕೆ ಹೋಗಲ್ಲ ಎಂದ ಸಿಂಪಲ್ ಸ್ಟಾರ್
ಮಾಜಿ ಸಚಿವ ಎಚ್​.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪಡುವಲಹಿಪ್ಪೆ ಗ್ರಾಮದ 197 ಮತಕೇಂದ್ರದಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಎಂಎಲ್‌ಸಿ ಸೂರಜ್‌ ರೇವಣ್ಣ ಮತ ಚಲಾಯಿಸಿದ್ದಾರೆ. ಬರಿಗಾಲಿನಲ್ಲಿ ಆಗಮಿಸಿ ಹಕ್ಕು ಚಲಾಯಿಸುವ ಮೂಲಕ ಎಚ್​.ಡಿ.ರೇವಣ್ಣ ಗಮನ ಸೆಳೆದರು.
ಇದನ್ನೂ ಓದಿ:ಹುಟ್ಟೂರಿನಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ; ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಫ್ಯಾನ್ಸ್!
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಎಚ್​ಡಿಕೆ ಮತದಾನ ಮಾಡಿದರು. ಕೇತಗಾನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆ ಸಂಖ್ಯೆ 235ರಲ್ಲಿ ಮತ ಚಲಾಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + two =
Remember me
