ಬೆಂಗಳೂರು:ರಾಜ್ಯರಾಜಧಾನಿ ಮತ್ತು ಬೆಂ. ಗ್ರಾಮಾಂತರ ಎರಡೂ ಜಿಲ್ಲೆಗಳು ನಾಳೆ(ಮಂಗಳವಾರ) ರಾತ್ರಿ 8 ಗಂಟೆಯಿಂದ ಒಂದು ವಾರ ಕಂಪ್ಲೀಟ್​ ಲಾಕ್​ ಆಗಲಿವೆ. ಈ ಬಗ್ಗೆ ರಾಜ್ಯ ಸರ್ಕಾರ ಶನಿವಾರವೇ ಅಧಿಕೃತ ಘೋಷಣೆಯನ್ನೂ ಮಾಡಿದೆ. ಇದೀಗ ಇಡೀ ರಾಜ್ಯವನ್ನು ಲಾಕ್​ಡೌನ್​ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪತ್ರ ಬರೆದಿರುವ ದೇವೇಗೌಡರು, ‘ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್​ಡೌನ್ ಜಾರಿ ಮಾಡಿರುವುದು ಸ್ವಾಗತಾರ್ಹ. ಇದರ ಜತೆಗೆ ರಾಜ್ಯಾದ್ಯಂತ ಲಾಕ್​ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ಸರ್ಕಾರವನ್ನು ಆಗ್ರಹಿಸುತ್ತೇನೆ’ ಎಂದಿದ್ದಾರೆ. ‘ಅಲ್ಲದೆ ಇಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಅವ್ಯವಹಾರ ಆರೋಪ ಮಾಡುತ್ತಲೇ ಕಾಲ ಕಳೆಯುವ ಬದಲು ಎಲ್ಲರೂ ಒಗ್ಗೂಡಿ ಮೊದಲು ಸಮಸ್ಯೆ ಬಗೆಹರಿಸೋಣ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.ಇದನ್ನೂ ಓದಿರಿಕ್ವಾರಂಟೈನ್ ಅಂದ್ರೆ ಹೀಗಿರಬೇಕು… ರಜೆಗೆ ಬಂದ ಸೈನಿಕರು ಹೊಲದಲ್ಲೇ ಏಕಾಂತ ವಾಸ
‘ಇನ್ನೊಂದು ಪ್ರಮುಖವಾದ ವಿಷಯ ಕರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜ್​ ಘೋಷಿಸಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂಬುದು ಹಲವು ನಾಯಕರ ಆರೋಪ.ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆ ಮಾಡಲಿ. ಈಗ ನಮಗೆ ಜನರ ಆರೋಗ್ಯ ಮುಖ್ಯ. ಮೊದಲು ನಾವೆಲ್ಲ ಅದರತ್ತ ಗಮನ ಹರಿಸೋಣ. ಸರ್ಕಾರವೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ನಾವೆಲ್ಲರೂ ಸರ್ಕಾರದ ಜತೆಯಲ್ಲಿದ್ದೇವೆ. ಜನರ ಆರೋಗ್ಯದ ಜತೆ ಚೆಲ್ಲಾಟ ಬೇಡ. ದಯವಿಟ್ಟು ಇನ್ನು ಮುಂದಾದರೂ ಎಚ್ಚೆತ್ತು ಕೆಲಸ ಮಾಡಿ’ ಎಂದು ದೇವೇಗೌಡರು ಮನವಿ ಮಾಡಿದ್ದಾರೆ.
‘ಆರೋಗ್ಯವೇ ಭಾಗ್ಯ. ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ಮಾಸ್ಕ್ ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರೂ ಸ್ಯಾನಿಟೈಸರ್​ನಿಂದ ಕೈ ಅನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ. ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಇಡೀ ದೇಶದ ಜನರಲ್ಲಿ ಮನವಿ ಮಾಡಿಕೊಳ್ಳುವೆ’ ಎಂದು ಹೇಳಿದ್ದಾರೆ.
ಕಳೆದ ತಿಂಗಳು ಬೆಂಗಳೂರನ್ನು ಸಂಪೂರ್ಣವಾಗಿ ಲಾಕ್​ಡೌನ್​ ಮಾಡುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದರು. ಇದಕ್ಕೆ ಒಪ್ಪದ ರಾಜ್ಯಸರ್ಕಾರ, ಯಾವುದೇ ಕಾರಣಕ್ಕೂ ಲಾಕ್​ಡೌನ್​ ಮಾಡಲ್ಲ ಎಂದಿತ್ತು. ಶನಿವಾರ ತಜ್ಞರ ಸಲಹೆ ಮೇರೆಗೆ ಮತ್ತೊಮ್ಮೆ ಬೆಂಗಳೂರು ಮತ್ತು ಬೆಂ.ಗ್ರಾಮಾಂತರ ಜಿಲ್ಲೆಗಳನ್ನು ಲಾಕ್​ ಮಾಡುವುದಾಗಿ ನಿರ್ಧರಿಸಿದೆ. ಇದೀಗ ದೇವೇಗೌಡರ ಸಲಹೆಗೆ ಸರ್ಕಾರದ ನಿರ್ಧಾರ ಏನು ಎಂಬುದನ್ನು ಕಾದು ನೋಡಬೇಕಿದೆ.
ಮಂಗಳವಾರ ರಾತ್ರಿಯಿಂದಲೇ ಲಾಕ್​ಡೌನ್​ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 10 =
Remember me
