ಬೆಂಗಳೂರು:ಮತ ಚಲಾವಣೆ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆ ಹೊರಬಿದ್ದ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್​ನ ನಾಯಕರು ತಮ್ಮ ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಬರುತ್ತವೆ. ನಾವೇ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿಕೊಂಡು ಬರುತ್ತಿದ್ದಾರೆ.
ಮತದಾನೋತ್ತರ ಸಮೀಕ್ಷೆಯಲ್ಲಿ ಎರಡು ಸಂಸ್ಥೆಗಳು ಬಿಜೆಪಿಗೆ ಬಹುಮತದ ಭವಿಷ್ಯ ನುಡಿದಿವೆ. ಉಳಿದ ಸಮೀಕ್ಷೆಗಳಲ್ಲಿ ಕೆಲವು ಸಂಸ್ಥೆಗಳು ಕಾಂಗ್ರಸ್​ಗೆ ಸ್ಪಷ್ಟ ಬಹುಮತ ನೀಡಿದ್ದರೆ, ಹೆಚ್ಚಿನವು ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿವೆ.
ಇದನ್ನೂ ಓದಿ:ಚುನಾವಣಾ ಫಲಿತಾಂಶದಂದು ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ
ಒಂದು ವೇಳೆ ಈ ಬಾರಿಯೂ ಕಳೆದ ಬಾರಿಯಂತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಜೆಡಿಎಸ್​ ಪಕ್ಷದ ಪಾತ್ರ ಪ್ರಮುಖವಾಗುತ್ತದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತೊಮ್ಮೆ ಕಿಂಗ್ ಮೇಕರ್ ಆಗಲಿದೆ ಎಂಬ ಮಾತುಗಳು ರಾಜ್ಯರಾಜಕಾರಣದಲ್ಲಿ ಕೇಳಿ ಬರುತ್ತಿವೆ. ಇದೆಲ್ಲದರೆ ನಡುವೆ ಇದೀಗ ಜೆಡಿಎಸ್​ನ ಪ್ರಮುಖ ನಾಯಕರಿಗೆ ತಲೆನೋವಾಗಿರುವುದು ಶಾಸಕರ ಖರೀದಿ ತಂತ್ರಗಾರಿಕೆ!
ಇದನ್ನೂ ಓದಿ:VIDEO | ಬಿಕಿನಿ ಧರಿಸಿ ಮೊಸಳೆಯೊಂದಿಗೆ ಈಜಾಡಿದ ಯುವತಿ; ವಿಡಿಯೋ ನೋಡಿ ಗಾಬರಿಪಟ್ಟ ನೆಟ್ಟಿಗರು
ಇದೀಗ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹಿನ್ನೆಲೆ ಜೆಡಿಎಸ್​ ನಾಯಕರು ಎಚ್ಚರಿಕೆ ವಹಿಸಿದ್ದಾರೆ. ತಮ್ಮದೇ ಆದ ರಾಜಕೀಯ ತಂತ್ರಗಾರಿಕೆಗಳನ್ನು ಹೆಣೆಯುತ್ತಿದ್ದಾರೆ. ಇದೆಲ್ಲದರ ನಡುವೆ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಜೆಡಿಎಸ್ ಅಭ್ಯರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತುಕಥೆ ನಡೆಸಿದ್ದಾರೆ. ಜತೆಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಮತದಾನೋತ್ತರ ಸಮೀಕ್ಷೆಗಳು ಏನೇ ಹೇಳಿದರೂ, ರಾಜ್ಯದ ಜನಾದೇಶ ಏನು ಎಂಬುದು ಶನಿವಾರ(ಮೇ 13)ದಂದು ಬಹಿರಂಗವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
