ಬೆಂಗಳೂರು:ಲಾಕ್ ಡೌನ್ ವೇಳೆಯಲ್ಲಿ ತರಕಾರಿ ಸಂಗ್ರಹ, ಸಾಗಾಟ, ಮಾರಾಟ ನಿರ್ಬಂಧಿಸಬಾರದು. ಕೃಷಿ ಉತ್ಪನ್ನಗಳನ್ನು ದೇಶದ ಯಾವುದೇ ಪ್ರದೇಶಕ್ಕೆ ಅಡೆತಡೆಗಳಿಲ್ಲದೆ ಸಾಗಾಟಕ್ಕೆ ಮತ್ತು ಮಾರಾಟಕ್ಕೆ ಅನುವು ಮಾಡಿಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳಿಗೆ ಪೂರ್ಣ ವಿನಾಯತಿ ನೀಡಬೇಕು. ಗ್ರಾಮ ಮಟ್ಟದಲ್ಲೇ ಹಾಲು ಸಂಗ್ರಹಿಸುವಂತೆ ತರಕಾರಿಯನ್ನು ಸರ್ಕಾರವೇ ಸಂಗ್ರಹಿಸಿ ಮಾರುಕಟ್ಟೆಗೆ ತರಬೇಕು. ತೋಟಗಾರಿಕೆ ಉತ್ಪನ್ನ ಮತ್ತು ಸಂಸ್ಕರಿಸಿದ ಪದಾರ್ಥಗಳ ರಫ್ತಿಗೆ ನಿರ್ಬಂಧ ಇರಬಾರದು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರಕೂಡದು ಎಂದು ಆಗ್ರಹಿಸಿದ್ದಾರೆ.
ಲಾಕ್ ಡೌನ್ ಆತುರದ ನಿರ್ಧಾರ:ರೈತರ ಪಾಲಿಗೆ ಲಾಕ್ ಡೌನ್ ಆತುರದ ನಿರ್ಧಾರದಂತೆ ಕಾಣಿಸುತ್ತಿದೆ. ವೈರಾಣು ಕಾಣಿಸಿಕೊಂಡಿದ್ದರೂ ಎರಡು ತಿಂಗಳು ಸುಮ್ಮನಿದ್ದ ಸರ್ಕಾರ ನಂತರ ಯಾವುದೇ ಮುಂದಾಲೋಚನೆ ಇಲ್ಲದೆ ತರಾತುರಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ರಾಜ್ಯ ಹಾಗೂ ದೇಶದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ರೈತರು, ಕೃಷಿ ಕಾರ್ಮಿಕರು, ದಿನಗೂಲಿ ನೌಕರರ ಅನುಕೂಲಕ್ಕಾಗಿ ಸರ್ಕಾರ ವಿಶೇಷ ಪ್ಯಾಕೇಜ್ ರೂಪಿಸಿ ಜಾರಿಗೊಳಿಸಬೇಕು. ಇಲ್ಲದೆ ಹೋದರೆ ಸರ್ಕಾರದ ನಿರ್ಲಕ್ಷ್ಯದಿಂದಾಗುವ ಅನಾಹುತಗಳಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದ್ದಾರೆ.
ಲಾಕ್​ಡೌನ್​ ವೇಳೆ ಆರೋಪಿಗಳ ಪ್ರಯಾಣಕ್ಕೆ ಸಹಾಯ ಮಾಡಿದ ಹಿರಿಯ ಐಪಿಎಸ್‌ ಅಧಿಕಾರಿಗೆ ಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
