ಬೆಂಗಳೂರು:ನೈಸ್ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಮತ್ತೆ ಗುಡುಗಿದ್ದಾರೆ. ರೈತರ ಜಮೀನು ತೆಗೆದುಕೊಂಡು ಅವರಿಗೆ ಹಣ ನೀಡಿಲ್ಲ. ಅನೇಕರು ಈಗಲೂ ಒದ್ದಾಡ್ತಿದ್ದಾರೆ. ಸರ್ಕಾರಿ ಜಮೀನನ್ನು ಅಡ ಇಟ್ಟರು ಇದು ಯಾವ ಪುರುಷಾರ್ಥಕ್ಕೆ ಎಂದು ಸುದ್ದಿಗೋಷ್ಠಿಯಲ್ಲಿ ದೇವೇಗೌಡ ಪ್ರಶ್ನಿಸಿದರು.
ನೈಸ್ ಸಂಸ್ಥೆ ಟೋಲ್ ಹಣವನ್ನು ಸರ್ಕಾರದ ಅನುಮತಿ ‌ಇಲ್ಲದೆ ಹೆಚ್ಚಳ ಮಾಡಿದೆ. ನೈಸ್ ಸಂಸ್ಥೆಯು ಸರ್ಕಾರದ ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿದೆ ಎಂದು ಹರಿಹಾಯ್ದರು. ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ನೈಸ್ ಸಂಸ್ಥೆಗೆ ಕೊಮ್ಮನಗಟ್ಟದ ಬಳಿ‌ ನೀಡಿರುವ 41 ಎಕರೆ ಜಾಗದ ಸೇಲ್ ಡೀಡ್ ರದ್ದುಗೊಳಿಸುವಂತೆ ಪತ್ರ ಬರೆದಿದ್ದೇನೆ ಎಂದರು.
ವಿಧಾನ ಪರಿಷತ್​ನಲ್ಲಿ ಈ ವಿಷಯ ಚರ್ಚೆ ಆಗಿದೆ. ಆದರೆ, ಯಾವುದೇ ಸಚಿವರು ಸರಿಯಾಗಿ ಉತ್ತರ ಕೊಟ್ಟಿಲ್ಲ. ನಾನು ಅನೇಕ ಪತ್ರಗಳನ್ನು ಸಿಎಂ ಮತ್ತು ಸಿಎಸ್ ಹಾಗೂ ಕೈಗಾರಿಕೆ ಇಲಾಖೆ ಕಾರ್ಯದರ್ಶಿಗೂ ಕೂಡ ಪತ್ರ ಬರೆದಿದ್ದೇನೆ. ಸರ್ಕಾರ ನೈಸ್ ವಿಚಾರವಾಗಿ ಕಮಿಟಿ‌ ಮಾಡಿದೆ‌. ಕಮಿಟಿಯನ್ನು ಪದೇ‌ ಪದೇ ಬದಲಾವಣೆ ಮಾಡುತ್ತಾ ಹೋದರು. ಸಚಿವ ಮಾಧುಸ್ವಾಮಿ ಈ ಕಂಪನಿ ವ್ಯವಹಾರಗಳು ಸರಿ ಇಲ್ಲ ಅಂತ ಹೇಳಿದ್ದಾರೆ. ಈಗ ಮಾಧುಸ್ವಾಮಿ ಅವ್ರನ್ನ ಕಮಿಟಿಯಿಂದ ಕೈ ಬಿಟ್ಟಿದ್ದಾರೆ ಎಂದರು.
ನಾನು ಒಳ್ಳೆ ಉದ್ದೇಶಕ್ಕಾಗಿ ಯೋಜನೆ ತಂದೆ. ಆದರೆ ಇದರಲ್ಲಿ ಅನೇಕ ನಿಯಮಗಳನ್ನೂ ಬದಲಾವಣೆ ‌ಮಾಡಿದ್ದಾರೆ. ನೈಸ್ ಬಗ್ಗೆ ಸದನ‌ ಸಮಿತಿ ಮಾಡಿದರು. ಸದನ ಸಮಿತಿ ವರದಿ ಕೊಟ್ಟಿದೆ. ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಮೈಸೂರು ರೋಡ್ ಮಾಡಿದ ಮೇಲೆ ಟೌನ್ ಶಿಪ್ ಮಾಡಬೇಕು ಅಂತ ಇತ್ತು. ಆದರೆ, ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಸದನ ಸಮಿತಿ ಟೋಲ್ ಸಂಗ್ರಹ ರದ್ದು ಮಾಡಿ ಅಂತ ವರದಿ ಕೊಟ್ಟಿತ್ತು. ಆದರೆ 2016 ರಲ್ಲಿ ನೈಸ್ ಸಂಸ್ಥೆ ಅವರು ಹೈಕೋರ್ಟ್ ನಲ್ಲಿ ಸ್ಟೇ ತೆಗೆದುಕೊಳ್ತಾರೆ. ಸದನ ಸಮಿತಿಯ ವರದಿ ಮೀರಿ ಟೋಲ್ ಸಂಗ್ರಹ ಆಗಿದೆ. 2016 ರಿಂದ 2022 ರವರೆಗೆ ಟೋಲ್ ಸಂಗ್ರಹ ಮಾಡಿದ್ದಾರೆ. ನಿತ್ಯ 2-3 ಕೋಟಿ ಸಂಗ್ರಹ ಆಗುತ್ತದೆ. ಯಾರಾದರೂ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರಾ? ಎಂದು ಕೇಳಿದರು‌
ನಮ್ಮ ಕೆಐಎಡಿಬಿ ಜಾಗವನ್ನು ಮೆಟ್ರೋಗೆ 14 ಕೋಟಿ ರೂ. ಗೆ ನೈಸ್ ಸಂಸ್ಥೆ ಮಾರಾಟ ಮಾಡಿದೆ. ಈಗ ಮತ್ತೆ ಮೆಟ್ರೋ ಗೆ ಸುಮಾರು 100 ಕೋಟಿಗೆ ಮಾರಾಟ ಮಾಡಿ ದುಡ್ಡು ಮಾಡಲು ನೈಸ್ ಸಂಸ್ಥೆ ಹೊರಟಿದೆ. ತುಂಬಾ ಆಸೆ ಇಟ್ಟು ಈ ಪ್ರಾಜೆಕ್ಟ್ ಮಾಡಿದ್ದೆ. ಆದರೆ ರೈತರಿಗೆ ನೈಸ್ ಸಂಸ್ಥೆ ಸರಿಯಾಗಿ ಪರಿಹಾರವನ್ನೇ ನೀಡಲಿಲ್ಲ. ಇದು ನನ್ನ‌ ಕನಸಿನ ಪ್ರಾಜೆಕ್ಟ್ ಆಗಿತ್ತು. ಆದ್ರೆ ಈ ಕಂಪನಿ ರೈತರಿಗೆ ಅನ್ಯಾಯ ಮಾಡಿತು. ಸರ್ಕಾರಿ ಜಮೀನನ್ನು ಅಡ ಇಟ್ಟು ಸಾಲ ಪಡೆದಿದ್ದಾರೆ. ದೇಶದಲ್ಲಿ ಉತ್ತಮ ರಸ್ತೆ ಮಾಡಲು ಈ ಪ್ರಾಜೆಕ್ಟ್ ಆಗಲೇ ಓಕೆ ಮಾಡಿದೆ. ಆದರೆ ಇವತ್ತು ಎಲ್ಲ ಉಲ್ಟಾ ಆಗಿದೆ. ಮನಸ್ಸಿಗೆ ಬಹಳ ನೋವಾಗುತ್ತದೆ‌. ವಿಪರ್ಯಾಸವೆಂದರೆ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಜತೆಗೆ ಕಾಂಕ್ರೀಟ್ ರೋಡ್ ಮಾಡಿದ್ದೇನೆ ಅಂತಾರೆ ಆದರೆ ಅದು ಕೂಡ ಕಳಪೆ ರಸ್ತೆ ಆಗಿದೆ ಎಂದು ಆಕ್ರೋಶ ಹೊರ ಹಾಕಿದರು.
ಈ‌ ಬಗ್ಗೆ ಅನೇಕ ಪತ್ರ ಬರೆದಿದ್ದೇನೆ. ಸರ್ಕಾರ ಏನು ಕ್ರಮ ತೆಗೆದುಕೊಂಡಿಲ್ಲ ಹೈಕೋರ್ಟ್ ಗೆ ಸರ್ಕಾರ ಅರ್ಜಿ ಹಾಕಬೇಕಿತ್ತು.ಇಷ್ಟು ಅಕ್ರಮ ಮಾಡಿದ್ದಾರೆ ಅಂತ ಅರ್ಜಿ ಹಾಕಬೇಕಿತ್ತು. ಆದರೆ ಯಾವ ಸರ್ಕಾರವೂ ಈ ಕೆಲಸವನ್ನ ಮಾಡಲಿಲ್ಲ. ಆಗ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಕೂಡ ಸುಪ್ರೀಂಕೋರ್ಟ್ ಆದೇಶ ಪಾಲನೆ‌ ಮಾಡು ಅಂತ ಹೇಳಿದ್ದೆ. ಸಿದ್ದರಾಮಯ್ಯ, ಯಡಿಯೂರಪ್ಪ, ಅವರಿಗೂ ಪತ್ರ ಬರೆದಿದ್ದೆ ಈಗ ಬೊಮ್ಮಾಯಿ ಅವರ ಸರ್ಕಾರಕ್ಕೆ ಬಹುಮತ ಇದೆ. ಈಗಲಾದರೂ ಕ್ರಮ ತೆಗೆದುಕೊಳ್ಳಲಿ. ಭೂಮಿ ಕಳೆದುಕೊಂಡವರು ನನ್ನ ಬಳಿ ಬಂದು ನೋವು ತೋಡಿಕೊಂಡಿದ್ದಾರೆ. ಇದು ಪ್ರಾರಂಭ. ಮುಂದೆ ಇನ್ನು ಹೋರಾಟ ಇದೆ. ನಾನು ಕಣ್ಣು ಮುಚ್ಚಿಕೊಂಡು ಈ ಪ್ರಾಜೆಕ್ಟ್ ಮಾಡಿಲ್ಲ. ನಿಯಮ ಬದ್ದವಾಗಿ ಮಾಡಿದ್ದೆ. ನನ್ನ ಮೇಲೆ ಎರಡು ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದರು. ಅದಕ್ಕೆ ಕೋರ್ಟ್ ಸ್ಟೇ ಕೊಟ್ಟಿದೆ. ನನ್ನ ಮೇಲೆ ಕೇಸ್ ಇದೆ. ಸರ್ಕಾರ ಈಗಲಾದರೂ ಕ್ರಮ ತೆಗೆದುಕೊಳ್ಳಲಿ. ಎಲ್ಲಾ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಆದರೆ ಏನು‌ ಪ್ರಯೋಜನ ಆಗಿಲ್ಲ. ಲೋಕೋಪಯೋಗಿ ‌ಇಲಾಖೆ ಸಚಿವರು ಮಾತ್ರ ನನ್ನ ಪತ್ರಕ್ಕೆ ಉತ್ತರ ಬರೆದಿದ್ದಾರೆ. ಈಗಿನ ಸಿಎಂ ಪಾಪ ತುಂಬಾ ಬ್ಯುಸಿ ಇದ್ದಾರೆ ಅದಕ್ಕೆ ಸಂಬಂಧ ಪಟ್ಟ ಮಂತ್ರಿಗಳಿಗೆ ಕೆಲಸ ಮಾಡಲು ಹೇಳಲಿ ಎಂದು ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಕೆನಡಾದಲ್ಲಿ ಭಾರತೀಯ ಮೂಲದ ನರ್ಸ್​ ದುರಂತ ಸಾವು

ಅವಿಶ್ವಾಸ ನಿರ್ಣಯದಲ್ಲಿ ಇಮ್ರಾನ್​ ಖಾನ್ ಸೋತರೆ ಏನಾಗಬಹುದು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪಾಕ್​ ಸಚಿವ​

ಪಾಕ್​ ಮಾಜಿ ಪ್ರಧಾನಿ ನವಾಜ್​ ಷರೀಫ್​ ಮೇಲೆ ಹಾಲಿ ಪ್ರಧಾನಿ ಇಮ್ರಾನ್​ ಖಾನ್​ ಬೆಂಬಲಿಗರಿಂದ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 19 =
Remember me
