ನವದೆಹಲಿ:ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂಬ ಸೆ.12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಇಂದು (ಸೆ.18) ಆದೇಶ ಹೊರಡಿಸಿದೆ.
ಇದನ್ನೂ ಓದಿ:ಬೆಂಗಳೂರಲ್ಲಿ ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ಅಭಿವೃದ್ಧಿ ಒಪ್ಪಂದಕ್ಕೆ ಸಹಿ ಹಾಕಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಈ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠರಾದ ಎಚ್​.ಡಿ. ದೇವೇಗೌಡ, “ಇವತ್ತಿನ CWMA ಆದೇಶ ಮಹತ್ತರವಾದ ಪೆಟ್ಟು. ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯವಿದೆ, ಮುಂದೇನು ಎಂಬುದು ತಿಳಿದಿಲ್ಲ. ನಮ್ಮ ರಾಜಕಾರಣಿಗಳಲ್ಲಿ ಒಗ್ಗಟ್ಟಿಲ್ಲ” ಎಂದು ಹೇಳಿದರು.
“ನಮ್ಮ ರಾಜ್ಯ ಸರಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಎಂಬುದು ತಿಳಿದಿಲ್ಲ. ಎಲ್ಲೋ ಒಂದೆಡೆ ನಾವು ಎಡವಿದ್ದೇವೆ, ನಮ್ಮ ರಾಜ್ಯಕ್ಕೆ ಎದುರಾಗುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಪ್ರತಿಭಟನೆಗೆ ಕೂತು ಸಮಸ್ಯೆಗೆ ಪರಿಹಾರ ಕೂಡ ಕಂಡುಕೊಂಡಿದ್ದೇವೆ. ಇಂದು ಸದನದಲ್ಲಿ ಕಾವೇರಿ ವಿಚಾರ ಪ್ರಸ್ತಾಪಿಸಿದ್ದೇನೆ” ಎಂದು ಹೇಳಿದರು.
ಇದನ್ನೂ ಓದಿ:ನಾಳೆ ಹೊಸ ಸಂಸತ್​ ಭವನಕ್ಕೆ ಕಲಾಪ ಶಿಫ್ಟ್​: ಹಳೆಯ ಕಟ್ಟಡವನ್ನು ಕೆಡುವುತ್ತಾರಾ? ಇಲ್ಲಿದೆ ಉತ್ತರ…
“ಕರ್ನಾಟಕ, ತಮಿಳುನಾಡಿಗೆ ಸಂಬಂಧವಿಲ್ಲದ ಅಧಿಕಾರಿಯನ್ನು ಗ್ರೌಂಡ್​ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ.ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟಿದೆ. ಆದ್ರೆ, ನಮ್ಮ ರಾಜಕಾರಣಿಗಳಲ್ಲಿ ಇಲ್ಲ. ಈ ವಿಚಾರದಲ್ಲಿ ಅವರು ಒಗ್ಗಟ್ಟಾಗಿ ನಿಂತಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗಿದೆ” ಎಂದು ಹೇಳಿದರು.
‘ಇದು ನಿಮ್ಮ ಕಲ್ಪನೆಗಾಗಿ’; ‘ಯುಐ’ ಟೀಸರ್​ ನೋಡಿ ಫ್ಯಾನ್ಸ್​ ಶಾಕ್!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − seven =
Remember me
