ಬೆಂಗಳೂರು:ನಮ್ಮ ಶಾಸಕರು, ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಹಾಗೂ ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನನಗೆ 91 ವರ್ಷವಾಗಿದ್ದರೂ, ಪಕ್ಷದ ಕೆಲಸ ಮಾಡುತ್ತಿದ್ದೇನೆ. ಪಕ್ಷ ಕಟ್ಟಲು ನೂರಾರು ಯುವಕರು ಮುಂದಾಗಿದ್ದಾರೆ. ಸೋತವರು ಹಾಗೂ ಗೆದ್ದವರು ನಿರಾಶಾರಾಗಬೇಕಿಲ್ಲ. ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಮಾಡಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಹೇಳಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ದಿನಕ್ಕೆ ಎರಡು ಲೋಕಸಭೆ ಕ್ಷೇತ್ರಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡುತ್ತೇವೆ. ಯಾವ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂದು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇವೆ. ಬಿಬಿಎಂಪಿ ಚುನಾವಣೆ ಮುಗಿಯುತ್ತಿದ್ದಂತೆ, ಲೋಕಸಭೆ ಚುನಾವಣೆಗೆ ಹೆಚ್ಚಿನ ತಯಾರಿ ಮಾಡುತ್ತೇವೆ ಎಂದರು.
ಇದನ್ನೂ ಓದಿ:#OctoberBaby ಎಂದು ಬರೆದುಕೊಂಡ ಸ್ವರಾ ಭಾಸ್ಕರ್; ತಾಯಿಯಾಗ್ತಿದ್ದಾರೆ ಬಾಲಿವುಡ್ ನಟಿ
ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೆವು. ಇದೀಗ ನಮ್ಮ ಮುಂದೆ ಸ್ಥಳೀಯ ಸಂಸ್ಥೆಯ ಚುನಾವಣೆ ಬರಲಿದೆ. ಬಳಿಕ ಲೋಕಸಭೆಯಲ್ಲಿ ಯಾರೊಂದಿಗೆ ಮೈತ್ರಿ ಮಾಡಬೇಕು ಎಂದು ಚರ್ಚಿಸಿ ತೀರ್ಮಾನಿಸುತ್ತೇವೆ. ರಾಷ್ಟ್ರ ರಾಜಕಾರಣದ ಬಗ್ಗೆ ವಿಶ್ಲೇಷಣೆ ಮಾಡಬಲ್ಲೆ. ಆದರೆ ಪ್ರಯೋಜನವೇನು? ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ನೀವು ದಿನಚರಿ ಹೇಗೆ ಪ್ರಾರಂಭಿಸುತ್ತೀರಿ? ಸ್ಮೃತಿ ಇರಾನಿ ನೀಡಿದ ಸಲಹೆ ಹೀಗಿದೆ…
ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಹಾಗೂ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ದೇವೇಗೌಡರ ಮುಂದಾಳತ್ವದಲ್ಲಿ ಚರ್ಚೆ ನಡೆಸಲಾಗಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಪಕ್ಷವನ್ನು ಮತ್ತೆ ತಳಮಟ್ಟದಿಂದ ಸಂಘಟಿಸುವ ಬಗ್ಗೆ ಮುಖಂಡರೊಂದಿಗೆ ಸಮಾಲೋಚನೆ ನಡೆದಿದ್ದು, ವಿಧಾನಸಭೆ ಚುನಾವಣೆಯಲ್ಲಾದ ತಪ್ಪನ್ನು ಪುನರಾವರ್ತಿಸದಂತೆ ಜಿಲ್ಲಾ ಮುಖಂಡರಿಗೆ ಎಚ್​.ಡಿ.ದೇವೇಗೌಡ ಅವರು ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + two =
Remember me
