ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಗೃಹ ಕಚೇರಿ ಮುಂದೆ ಜೂ.29ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಧರಣಿ ನಡೆಸಲಿದ್ದಾರೆ.
ಈ ಬಗ್ಗೆ ಸಿಎಂಗೆ ಖುದ್ದು 7 ಪುಟಗಳ ಪತ್ರ ಬರೆದಿರುವ ದೇವೇಗೌಡ, ‘ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣಗೌಡರು ಕೆ.ಆರ್. ಪೇಟೆಯ ಜೆಡಿಎಸ್ ಕಾರ್ಯಕರ್ತರಿಗೆ ಕಿರಿಕುಳ ನೀಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳದಿದ್ದಲ್ಲಿ ನಿಮ್ಮ ಗೃಹಕಚೇರಿ ಕೃಷ್ಣಾ ಮುಂದೆ ಧರಣಿ ಕೂರುತ್ತೇನೆ’ ಎಂದು ಎಚ್ಚರಿಸಿದ್ದಾರೆ.ಇದನ್ನೂ ಓದಿರಿಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು, ವಿದ್ಯಾರ್ಥಿಗಳಲ್ಲಿ ಹೆಚ್ಚಿದೆ ಆತಂಕ
‘ಚುನಾವಣಾ ವೈಷಮ್ಯದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಜಿಪಂ ಜೆಡಿಎಸ್​ ಸದಸ್ಯ ಎಚ್.ಟಿ. ಮಂಜುಗೆ ಕಿರುಕುಳ ನೀಡುತ್ತಿದ್ದಾರೆ. ಮಂಜುಗೆ ಸೇರಿದ ಸ್ಟೋನ್ ಕ್ರಷರ್, ಕ್ವಾರಿ ಮೈನಿಂಗ್​ಗೆ ಅಡ್ಡಗಾಲು ಹಾಕುತ್ತಿದ್ದಾರೆ. ಎಲ್ಲ ಇಲಾಖೆಗಳ ಅನುಮತಿ ಇದ್ದರೂ ದುರುದ್ದೇಶದಿಂದ ತೊಂದರೆ ಕೊಡುತ್ತಿದ್ದಾರೆ. ಈ ಬಗ್ಗೆ ದೂರವಾಣಿ ಮೂಲಕ ನಾನೇ ನಿಮ್ಮ(ಸಿಎಂ) ಗಮನಕ್ಕೆ ತಂದಿದ್ದೆ. ಅಂದು ನಾರಾಯಣಗೌಡಗೆ ಬುದ್ಧಿವಾದ ಹೇಳುವುದಾಗಿ ತಿಳಿಸಿದ್ರಿ. ಆದರೂ ಏನೂ ಪ್ರಯೋಜನವಾಗಿಲ್ಲ’ ಎಂದು ದೇವೇಗೌಡರು ಅಸಮಾಧಾನ ಹೊರ ಹಾಕಿದ್ದಾರೆ.
ಇದನ್ನೂ ಓದಿರಿಥರ್ಮಲ್​ ಸ್ಕ್ರೀನಿಂಗ್​ ವೇಳೆ ಕುಸಿದುಬಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ
‘ನಾರಾಯಣಗೌಡರ ಕಿರುಕುಳದ ಬಗ್ಗೆ ದೂರು ನೀಡಲು ಮಂಡ್ಯ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್​ ಅವರ ಗಮನಕ್ಕೆ ತರಲು ದೂರವಾಣಿ ಕರೆ ಮಾಡಿದರೂ ಸ್ವೀಕರಿಸಿಲ್ಲ. ಜಿಲ್ಲಾಧಿಕಾರಿಯೂ ಉದ್ದಟತನ ತೋರಿದ್ದಾರೆ’ ಎಂದು ದೇವೇಗೌಡರು ಪತ್ರದಲ್ಲಿ ಆರೋಪಿಸಿದ್ದಾರೆ.
‘ನನ್ನ 60 ವರ್ಷಗಳ ರಾಜಕಾರಣದಲ್ಲಿ ಇಂತಹ ಕೆಟ್ಟ ಪರಿಸ್ಥಿತಿಯನ್ನು ಕಂಡಿರಲಿಲ್ಲ. ಚುನಾವಣೆಯ ಸೇಡು ತೀರಿಸಿಕೊಳ್ಳಲು ಸಚಿವರು ಮುಂದಾಗಿದ್ದಾರೆ.ಕಾನೂನುಬದ್ಧವಾಗಿ ಎಚ್​.ಟಿ.ಮಂಜು ಅವರಿಗೆ ವ್ಯವಹಾರ ನಡೆಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಇಲ್ಲದಿದ್ದರೆ ಜೂ.29ರಂದು ಸಿಎಂ ನಿವಾಸದ ಎದುರು ಧರಣಿ ಸತ್ಯಾಗ್ರಹ ಕೂರುತ್ತೇನೆ. ಅಂದು ಜೆಡಿಎಸ್ ಶಾಸಕರು ಮತ್ತು ಮುಖಂಡರೂ ಪಾಲ್ಗೊಳ್ಳಲಿದ್ದಾರೆ’ ಎಂದು ಸಿಎಂಗೆ ಎಚ್ಚರಿಸಿದ್ದಾರೆ.
ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
