ಬೆಂಗಳೂರು:ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಜನ್ಮದಿನಕ್ಕೆ ಇನ್ನೆರಡು ದಿನ ಬಾಕಿ ಇದೆ. ಪ್ರತಿ ವರ್ಷ ಡಿ.16 ರಂದು ಎಚ್​ಡಿಕೆ ನಿವಾಸ, ಜೆಡಿಎಸ್​ ಪಕ್ಷದ ಕಚೇರಿ ಬಳಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದರು. ಈ ಭಾರಿ ಆ ಸಡಗರಕ್ಕೆ ಸ್ವತಃ ಕುಮಾರಸ್ವಾಮಿಯೇ ಅವಕಾಶ ಮಾಡಿಕೊಡುತ್ತಿಲ್ಲ.
‘ಡಿ.16 ನನ್ನ‌ ಜನ್ಮದಿನ. ಕರೊನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ’ ಎಂದು ಟ್ವೀಟ್​ ಮಾಡಿರುವ ಕುಮಾರಸ್ವಾಮಿ, ‘ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯ ಇರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೇ ನನಗೆ ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು’ ಎಂದಿದ್ದಾರೆ.
‘ಪ್ರತಿ ವರ್ಷದ ಜನ್ಮದಿನವೂ ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ. ಆದರೆ, ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ.2/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)December 14, 2020

ಸಾರಿಗೆ ಮುಷ್ಕರದ ಕಿರಿಕಿರಿ ನಡುವೆಯೂ ಸಚಿವ ಸ್ಥಾನಕ್ಕೆ ಲಾಬಿ

ಸ್ಕೆಚ್​ ಹಾಕಿ ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದು ನಾನೇ… ಎಂದ ಯೋಗೇಶ್ವರ್​ ಆಡಿಯೋ ವೈರಲ್​

‘ಕೋಡಿಹಳ್ಳಿ ಚೈನಾ ಮಾಡೆಲ್, ಸಾರಿಗೆ ನೌಕರರನ್ನು ಎತ್ತಿಕಟ್ಟುವ ಆತನನ್ನು ಬಂಧಿಸಬೇಕು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
