ರಾಮನಗರ:ರಾಜ್ಯ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಚುನಾವಣೆಯಲ್ಲಿ ನನ್ನನ್ನು ಮನೆಯ ಮಗನ ರೀತಿ ಗೆಲ್ಲಿಸ್ತೀರಾ ಅಂತ ನಂಬಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿ ರಾಜ್ಯದಲ್ಲಿ ಏಕಾಂಗಿಯಾಗಿ ತಿರುಗಾಡಿದ್ದೇನೆ. ನನ್ನ ಆರೋಗ್ಯವನ್ನು ಲೆಕ್ಕಿಸದೇ 18 ಗಂಟೆ ಕೆಲಸ ಮಾಡಿದ್ದೇನೆ. ತಾಯಂದಿರು ಈ ಬಾರಿ ನಮಗೆ ಆಶಿರ್ವಾದ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಚನ್ನಪಟ್ಟಣದ ಶೇರು ಸರ್ಕಲ್ ಬಳಿ ಮಾತನಾಡಿದ ಅವರು, ಜೆಡಿಎಸ್​ ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿ ರಾಜ್ಯದಲ್ಲಿ ಏಕಾಂಗಿಯಾಗಿ ತಿರುಗಾಡಿ ನಾಡಿನ ಜನತೆಯ ವಿಶ್ವಾಸಗಳಿಸಿದ್ದೇನೆ. ಅಲ್ಲದೇ, ಈ ಚುನಾವಣೆಯಲ್ಲಿ ನನ್ನನ್ನು ಮನೆಯ ಮಗನ ರೀತಿ ಗೆಲ್ಲಿಸ್ತೀರಾ ಎಂದು ನಂಬಿ ಕೊನೆಯದಾಗಿ ಚನ್ನಪಟ್ಟಣಕ್ಕೆ ಬಂದಿದ್ದೇನೆ ಎಂದರು.
ಇದನ್ನು ಓದಿ:World Red Cross Day; ಈ ದಿನದ ಮಹತ್ವ, ವಿಶೇಷತೆ ಗೊತ್ತಾ…?
ಹಾಸನದಲ್ಲಿ ಜನ್ಮ ತಾಳಿದರೂ ರಾಮನಗರ ಜಿಲ್ಲೆ ನನಗೆ ರಾಜಕೀಯ ಜನ್ಮ ಕೊಟ್ಟ ಜಿಲ್ಲೆಯಾಗಿದೆ. ಈ ಚುನಾವಣೆಯಲ್ಲಿ ಬಹಳಷ್ಟು ಜನ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಕಳೆದ ಬಾರಿ ನಾನು 14 ತಿಂಗಳು ಮುಖ್ಯಮಂತ್ರಿಯಾದಾಗ ಕೆಲವು ಎದುರಾಳಿಗಳು ನನ್ನನ್ನು ಇಳಿಸಲಿಕ್ಕೆ ಬಹಳಷ್ಟು ಪ್ರಯತ್ನಪಟ್ಟಿದ್ದಾರೆ ಎಂದು ಆರೋಪಿಸಿದರು.
ನನ್ನ ಆರೋಗ್ಯವನ್ನು ಲೆಕ್ಕಿಸದೇ 18 ಗಂಟೆ ಕೆಲಸ ಮಾಡಿದ್ದೇನೆ. ತಾಯಂದಿರು ಈ ಬಾರಿ ನಮಗೆ ಆಶೀರ್ವಾದ ಮಾಡುವುದಾಗಿ ಹೇಳಿದ್ದಾರೆ. ಇನ್ನು ಕೆಲವರು ಚನ್ನಪಟ್ಟಣದಲ್ಲಿ ನೀವು ಸೋಲ್ತಿರಾ, ಅದಕ್ಕಾಗಿ ಹಳ್ಳಿ ಹಳ್ಳಿಗೆ ಹೋಗಿ ಪ್ರಚಾರ ಮಾಡಬೇಕೆಂದು ಕೆಲವರು ಹೇಳಿದ್ದರೆಂದು ತಿಳಿಸಿದ್ದಾರೆ.
ಚನ್ನಪಟ್ಟಣ-ರಾಮನಗರ ನನಗೆ ಎರಡು ಕಣ್ಣುಗಳು ಇದ್ದ ಹಾಗೆ, ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನತೆ. ಅಲ್ಲದೇ ರಾಮನಗರ-ಚನ್ನಪಟ್ಟಣ ಕ್ಷೇತ್ರವನ್ನು ಅವಳಿ ನಗರ ಮಾಡಿ ಅಂತ ಸರ್ಕಾರಕ್ಕ ಮನವಿ ಕೂಡ ಮಾಡಿಕೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − twelve =
Remember me
