ಬೆಂಗಳೂರು:ರಾಜ್ಯದಲ್ಲಿ ಉದ್ಯೋಗ ಪಡೆಯಲು ಸೂಕ್ತ ಅಭ್ಯರ್ಥಿಗಳಿಲ್ಲ ಎಂಬ ಡಿಸಿಎಂ ಅಶ್ವಥ್ ನಾರಾಯಣ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಭಾನುವಾರ ಬೆಳಗ್ಗೆ ಟ್ವೀಟ್​ ಮಾಡಿರುವ ಎಚ್​ಡಿಕೆ, ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ. ಪಕೋಡ ತಯಾರಿಸಲು ಕೂಡ ಈರುಳ್ಳಿಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ? ರಾಜ್ಯ ಸೇರಿದಂತೆ ದೇಶದಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹೊಸ ಉದ್ಯೋಗ ಸೃಷ್ಟಿ ಒತ್ತಟ್ಟಿಗಿರಲಿ. ಇರುವ ಉದ್ಯೋಗ ಕಳೆದುಕೊಂಡು ಉದ್ಯೋಗಸ್ಥರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ. ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳುಹಿಸಲೇ? ಕಚೇರಿಗೆ ಕಳುಹಿಸಲೇ? ಕೆಲಸ ಕೊಡಿಸುತ್ತೀರಾ? ಎಂದು ಅಶ್ವಥ್​ ನಾರಾಯಣರಿಗೆ ಟ್ವೀಟ್​ ಮೂಲಕ ಸವಾಲು ಎಸೆದಿದ್ದಾರೆ.(ದಿಗ್ವಿಜಯ ನ್ಯೂಸ್​)
ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ.ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳುಹಿಸಲೇ? ಕಚೇರಿಗೆ ಕಳುಹಿಸಲೇ? ಕೆಲಸ ಕೊಡಿಸುತ್ತೀರಾ?3/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)January 11, 2020
ಇಂತಹ ಹಸಿ ಸುಳ್ಳುಗಳನ್ನು ಯಾರನ್ನು ಮೆಚ್ಚಿಸಲು ಹೇಳುತ್ತೀರಿ? ನಾಚಿಕೆ ಆಗಬೇಕು ನಿಮಗೆ.ಯೋಗ್ಯ ಉದ್ಯೋಗಾಕಾಂಕ್ಷಿಗಳನ್ನು ನಿಮ್ಮ ಮನೆಗೆ ಕಳುಹಿಸಲೇ? ಕಚೇರಿಗೆ ಕಳುಹಿಸಲೇ? ಕೆಲಸ ಕೊಡಿಸುತ್ತೀರಾ?3/3
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
