ಬೆಂಗಳೂರು:ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಅವರ ಸಹೋದರ, ವಿಧಾನಪರಿಷತ್​ ಸದಸ್ಯ ಸೂರಜ್​ ರೇವಣ್ಣ ಅವರ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ. ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅಷ್ಟೇ ಚರ್ಚೆ ಮಾಡಿ. ಇಂತಹ ವಿಚಾರಗಳನ್ನು ನನ್ನ ಹತ್ತಿರ ಯಾಕೆ ಚರ್ಚೆ ಮಾಡುತ್ತೀರಾ. ಅದರ ಅವಶ್ಯಕತೆ ಏನಿದೆ ಕಾನೂನು ಇದ್ದು, ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ ಎಂದು ಸಿಡಿಮಿಡಿಗೊಂಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಉಪ-ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ಆದರೂ ಸ್ಪರ್ಧಿಸಲಿ ಇಲ್ಲವೇ ತಮ್ಮೊಂದಿಗೆ ಇನ್ನೂ ನಾಲ್ವರನ್ನು ಸೇರಿಸಿಕೊಂಡು ಕಣಕ್ಕಿಳಿಯಲಿ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ನಿಲ್ಲಬಹುದು. ಅದಕ್ಕೆ ದೊಡ್ಡ ಮಹತ್ವ ಕೊಡೋದು ಬೇಡ. ಅದು ನಮ್ಮ ಪಕ್ಷಕ್ಕೆ ಸಂಬಂಧಪಡದ ವಿಷಯ ಎಂದು ಹೇಳಿದರು. ನಮ್ಮ ಕ್ಯಾಂಡಿಡೇಟ್ ಬಗ್ಗೆ ಕಾಲವೇ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 2 =
Remember me
