ನವದೆಹಲಿ:ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು ಎಂದು ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್​​.ಡಿ ಕುಮಾರಸ್ವಾಮಿ ಅವರು ಹೇಳಿದರು.
ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ತೆಗೆದು ಬಿಡಿ: ಪ್ರಧಾನಿ ಮೋದಿ ಮನವಿ
ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿ ತಮ್ಮ ಎಕ್ಸ್​ ಖಾತೆಯಲ್ಲಿ ಟ್ಟೀಟ್ ಮಾಡಿರುವ ಅವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಾಯಿತು ಎಂದು ಪೋಸ್ಟ್ ಮಾಡಿದ್ದಾರೆ.
ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು ಎಂದು ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಅವರು ಹೇಳಿದರು. ಈ ಸಂದರ್ಭದಲ್ಲಿ ಸಚಿವಾಲಯದ ಅಧಿಕಾರಿಗಳ ಜತೆ ಸಭೆ ನಡೆಸಲಾಯಿತು.
ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.ಜೂನ್​ 09 ರಂದು ರಾಷ್ಟ್ರಪತಿ ಭವನದಲ್ಲಿ ದೇಶ-ವಿದೇಶದ ಅನೇಕ ಗಣ್ಯರ ಎದುರಿನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ವಿವಿಧ ದೇಶಗಳ ಪ್ರಮುಖರು ಇದರಲ್ಲಿ ಭಾಗಿ ಆಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
