ಬೆಂಗಳೂರು:ಸೂಕ್ತ ದಾಖಲೆಗಳಿಲ್ಲದ ಕಾರಣ ಸಾಲಮನ್ನಾದಿಂದ ರೈತರನ್ನು ಕೈ ಬಿಡುವ ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಟ್ವೀಟ್​ ಮೂಲಕ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಚ್​ಡಿಕೆ, ಸಾಲಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ ಎಂದು ಸಂದೇಶ ರವಾನಿಸಿದ್ದಾರೆ.
ಸಾಲಮನ್ನಾ ಬಗ್ಗೆ ಬಿಜೆಪಿಯ ಯಾರೊಬ್ಬರು ತಲೆ ಕೆಡಿಸಿಕೊಳ್ಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮೀಸಲಿಟ್ಟಿದ್ದ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿ ಹಣವನ್ನು ಬಿಜೆಪಿ ಸರ್ಕಾರ ಬೇರೆಡೆಗೆ ವರ್ಗಾಯಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರಾಜ್ಯದ ಒಂದು ಲಕ್ಷದ ಐವತ್ತ್ಮೂರು ಸಾವಿರ ರೈತರಿಗೆ ವಂಚಿಸಲಾಗಿದೆ ಎಂದು ದೂರಿದ್ದಾರೆ.
‘ರೈತರ ಸಾಲ ಮನ್ನಾ’ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ. ದಾಖಲೆಗಳ ನೆಪವೊಡ್ಡಿ ಸಾಲಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
'ರೈತರ ಸಾಲ ಮನ್ನಾ' ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ.ದಾಖಲೆಗಳ ನೆಪವೊಡ್ಡಿ ಸಾಲ ಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ.1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)February 28, 2020

ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ.3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)February 28, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
