ಬೆಂಗಳೂರು:ಕರೊನಾ ವೈರಸ್ ನಿಯಂತ್ರಣಾ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್​​.ಡಿ.ಕುಮಾರಸ್ವಾಮಿ ಆರೋಗ್ಯ ಸಚಿವರಲ್ಲೇ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಸರಣಿ ಟ್ವೀಟ್​ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಚ್​ಡಿಕೆ, ಕರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಈಗ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಟೀಕಿಸಿದ್ದಾರೆ.
ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು. ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು. ಘೋಷಣೆಗಳು ಹಾಗೂ ಹೇಳಿಕೆಗಳಿಗೆ ಸೀಮಿತವಾಗಬಾರದು. ಅವೆಲ್ಲವೂ ಕಾರ್ಯರೂಪಕ್ಕೆ ಬರಬೇಕು. ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರೊನಾ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.
ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು.ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು.ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು,ಕಾರ್ಯರೂಪಕ್ಕೆ ಬರಬೇಕು ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ "ಮರಣ ಮೃದಂಗ" ಬಾರಿಸುವ ಕಾಲ ದೂರವಿಲ್ಲ(6/6)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 28, 2020

ವಿದ್ಯುತ್​ ಬಿಲ್​ ಪಾವತಿಗೆ ಮೂರು ತಿಂಗಳು ಗಡುವು ನೀಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದ ಕೇಂದ್ರ

ಕೊರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ.(5/6)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 28, 2020

ಪ್ರಯಾಣಿಕರ ಗಮನಕ್ಕೆ – ನೀವು ಈ ಬಸ್​ನಲ್ಲಿ ಪ್ರಯಾಣಿಸಿದ್ದೀರಾ? ಹಾಗಿದ್ದರೆ ಇಲ್ಲಿದೆ ನಿಮಗೊಂದು ಸೂಚನೆ..

ಕೊರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ.(1/6)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 28, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + twenty =
Remember me
