ಬೆಂಗಳೂರು:ಹಿಂದಿ ಭಾಷೆ ಮಾತನಾಡಲು ಆಗದವರು ತರಬೇತಿಯಿಂದ ಹೊರ ನಡೆಯಬಹುದು ಎಂದಿದ್ದ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆಕ್ರೋಶ ಹೊರಹಾಕಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ‘ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ,’ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್‌ ಬಾರದೆಂಬ ವಿನಂತಿಯೋ ಅಥವಾ ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ? ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಪೊಲೀಸ್ ಇಲಾಖೆಯಲ್ಲಿ ಪಾಕ್ ಪ್ರೇಮಿ: ವಾಟ್ಸಾಪ್ ಗ್ರೂಪ್​ನಲ್ಲಿ ಪಾಕ್​ ಪರ ಪೋಸ್ಟ್
ಸಂವಿಧಾನ ಬದ್ಧ ‘ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗವಾಗಿವೆ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸೇರಿದಂತೆ ಮಿಕ್ಕೆಲ್ಲ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್‌ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ ಅವರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.
ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕೊಟೆಚಾ 'ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು. ನನಗೆ ಚೆನ್ನಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ,’ ಎಂದು ಹೇಳಿರುವುದು ತಿಳಿಯಿತು. ಇದೇನು ಇಂಗ್ಲಿಷ್‌ ಬಾರದೆಂಬ ವಿನಂತಿಯೋ, ಹಿಂದಿ ಹೇರಬೇಕು ಎಂಬ ನಾಚಿಕೆ ಇಲ್ಲದ ಉತ್ಸಾಹವೋ?1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 23, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
